ರಣಜಿ ಟ್ರೋಫಿ: ರೆಕಾರ್ಡ್ ಬ್ರೇಕ್ ಮಾಡಿದ ಹರಿಯಾಣ ವೇಗಿ

ರಣಜಿ ಟ್ರೋಫಿ: ರೆಕಾರ್ಡ್ ಬ್ರೇಕ್ ಮಾಡಿದ ಹರಿಯಾಣ ವೇಗಿ

0Shares

ರಣಜಿ ಟ್ರೋಫಿ 2024ರ ಆವೃತ್ತಿಯಲ್ಲಿ ಹರಿಯಾಣದ ವೇಗದ ಬೌಲರ್ ಇತಿಹಾಸ ಸೃಷ್ಟಿಸಿದ್ದಾರೆ. ಕೇರಳ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಹರಿಯಾಣದ ವೇಗದ ಬೌಲರ್ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ್ದಾರೆ. ಹರಿಯಾಣದ ವೇಗದ ಬೌಲರ್ ಅನ್ಶುಲ್ ಕಾಂಬೋಜ್ ಅವರು ತಮ್ಮ ಅದ್ಭುತ ಬೌಲಿಂಗ್ ಪ್ರದರ್ಶನದ ಮೂಲಕ ಟೀಮ್ ಇಂಡಿಯಾದ ಮಾಜಿ ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ದಾಖಲೆಯನ್ನು ಮುರಿದಿದ್ದಾರೆ. ಕೇರಳ ವಿರುದ್ಧದ ಪಂದ್ಯದಲ್ಲಿ ಅನ್ಶುಲ್ ಕಾಂಬೋಜ್ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.

ಅನ್ಶುಲ್ ಕಾಂಬೋಜ್ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್ ಪಡೆದ ಆರನೇ ಮತ್ತು ರಣಜಿ ಟ್ರೋಫಿಯಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತದ ಬೌಲರ್ ಎನಿಸಿಕೊಂಡಿದ್ದಾರೆ. ಇದಲ್ಲದೆ, ಒಂದೇ ಇನಿಂಗ್ಸ್‌ನಲ್ಲಿ 10 ವಿಕೆಟ್‌ ಕಬಳಿಸಿರುವ ಅನಿಲ್ ಕುಂಬ್ಳೆ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ಲಾಹ್ಲಿಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕೇರಳ ತಂಡದ ಶಾನ್ ರೋಜರ್ ಅವರನ್ನು ಔಟ್ ಮಾಡುವ ಮೂಲಕ ಅನ್ಶುಲ್ ಕಾಂಬೋಜ್ ಈ ಸಾಧನೆ ಮಾಡಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now