ಮೊಟ್ಟ ಮೊದಲ ವಿದೇಶಿ ಲೀಗ್​ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್

ಮೊಟ್ಟ ಮೊದಲ ವಿದೇಶಿ ಲೀಗ್​ನ ಮೊದಲ ಪಂದ್ಯದಲ್ಲಿ ಶಿಖರ್ ಧವನ್ ಫೇಲ್

0Shares

ಡಿಸೆಂಬರ್ 2 ರಂದು ನಡೆದ ಪಂದ್ಯದಲ್ಲಿ ಮೊದಲ ಬಾರಿಗೆ ಕಣಕ್ಕಿಳಿದಿದ್ದ ಶಿಖರ್ ಧವನ್, ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಕರ್ನಾಲಿ ಯಾಕ್ಸ್‌ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 14 ಎಸೆತಗಳನ್ನು ಎದುರಿಸಿದ್ದ ಶಿಖರ್ ಧವನ್ 14 ರನ್ ಗಳಿಸಿ ಔಟಾದರು. ಅಂದರೆ ತಮ್ಮ ಇನ್ನಿಂಗ್ಸ್​ನಲ್ಲಿ ಧವನ್ 100ರ ಸ್ಟ್ರೈಕ್ ರೇಟ್​ನಲ್ಲಿ ಬ್ಯಾಟ್ ಬೀಸಿದರು.

ಕೆಲವೇ ದಿನಗಳ ಹಿಂದೆ ಭಾರತ ಕ್ರಿಕೆಟ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದ ಟೀಂ ಇಂಡಿಯಾದ ಮಾಜಿ ಆರಂಭಿಕ ಆಟಗಾರ ಶಿಖರ್ ಧವನ್, ಇದೀಗ ವಿದೇಶಿ ಲೀಗ್​ಗಳಲ್ಲಿ ಬ್ಯಾಟ್ ಬೀಸಲು ಮುಂದಾಗಿದ್ದಾರೆ. ಆ ಪ್ರಕಾರ ನವೆಂಬರ್ 30 ರಿಂದ ಆರಂಭವಾಗಿರುವ ನೇಪಾಳ ಪ್ರೀಮಿಯರ್ ಲೀಗ್​ನಲ್ಲಿ ಶಿಖರ್ ಧವನ್ ಕಣಕ್ಕಿಲಿಯುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now