IND vs AUS: ಅಡಿಲೇಡ್ ಟೆಸ್ಟ್ನ ಮೊದಲ ಇನ್ನಿಂಗ್ಸ್ನಲ್ಲಿ ಟೀಂ ಇಂಡಿಯಾ ಕೇವಲ 180 ರನ್ಗಳಿಗೆ ಆಲೌಟ್ ಆಗಿದೆ. ಆಸೀಸ್ ಪರ ವೇಗಿ ಮಿಚೆಲ್ ಸ್ಟಾರ್ಕ್ 6 ವಿಕೆಟ್ ಪಡೆಯುವ ಮೂಲಕ ಭಾರತದ ಬ್ಯಾಟಿಂಗ್ ಬೆನ್ನೇಲುಬು ಮುರಿದರು. ಟೀಂ ಇಂಡಿಯಾ ಪರ ನಿತೀಶ್ ರೆಡ್ಡಿ ಗರಿಷ್ಠ 42 ರನ್ಗಳ ಇನ್ನಿಂಗ್ಸ್ ಆಡಿದರು.
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಅಡಿಲೇಡ್ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 180 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿದೆ. ಕಾಂಗರೂ ವೇಗಿಗಳ ದಾಳಿಗೆ ನಲುಗಿದ ಟೀಂ ಇಂಡಿಯಾ ಮೊದಲ ದಿನದಾಟದ ಎರಡನೇ ಸೆಷನ್ನಲ್ಲೇ ತನ್ನ ಮೊದಲ ಇನ್ನಿಂಗ್ಸ್ಗೆ ಅಂತ್ಯ ಹಾಡಿತು. ಟೀಂ ಇಂಡಿಯಾ ಪರ ಕೊನೆಯಲ್ಲಿ ಏಕಾಂಗಿ ಹೋರಾಟ ನೀಡಿದ ಯುವ ಆಲ್ರೌಂಡರ್ ನಿತೀಶ್ ಕುಮಾರ್ ರೆಡ್ಡಿ 42 ರನ್ಗಳ ಇನ್ನಿಂಗ್ಸ್ ಆಡಿದರು. ಟಾಪ್ ಆರ್ಡರ್ನಲ್ಲಿ ಕೆಎಲ್ ರಾಹುಲ್ ಹಾಗೂ ಶುಭ್ಮನ್ ಗಿಲ್ ಕ್ರಮವಾಗಿ 37 ಮತ್ತು 31 ರನ್ಗಳ ಕಾಣಿಕೆ ನೀಡಿದರು. ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ ಕಂಡುಬರಲಿಲ್ಲ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now