U-19 Asia Cup 2024: ಯುಎಇಯಲ್ಲಿ ನಡೆದ U-19 ಏಷ್ಯಾಕಪ್ ಸೆಮಿ ಫೈನಲ್ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಾಂಗ್ಲಾದೇಶ ಏಕಪಕ್ಷೀಯವಾಗಿ ಸೋಲಿಸಿದೆ. ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ, ಬಾಂಗ್ಲಾದ ಮಾರಕ ಬೌಲಿಂಗ್ ಮುಂದೆ ಕೇವಲ 116 ರನ್ಗಳಿಗೆ ಆಲೌಟ್ ಆಯಿತು. ಈ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ಸುಲಭವಾಗಿ ಗೆದ್ದು ಫೈನಲ್ಗೆ ಪ್ರವೇಶಿಸಿತು. ಈಗ ಫೈನಲ್ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ಮುಖಾಮುಖಿಯಾಗಲಿವೆ.
ಯುಎಇಯಲ್ಲಿ ನಡೆಯುತ್ತಿರುವ ಪುರುಷರ ಅಂಡರ್-19 ಏಷ್ಯಾ ಕಪ್ ಟೂರ್ನಿ ಅಂತಿಮ ಹಂತ ತಲುಪಿದೆ. ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ತಂಡಗಳ ನಡುವೆ ದುಬೈನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಪಾಕ್ ತಂಡ ಏಕಪಕ್ಷೀಯವಾಗಿ ಸೋಲನುಭವಿಸಿದ್ದು, ಟೂರ್ನಿಯಿಂದ ಹೊರಬಿದ್ದಿದೆ. ಅದೇ ವೇಳೆ ಬಾಂಗ್ಲಾದೇಶ ತಂಡ ಫೈನಲ್ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ. ಇದೀಗ ಡಿಸೆಂಬರ್ 8 ರಂದು ನಡೆಯಲ್ಲಿರುವ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ಪ್ರಶಸ್ತಿಗಾಗಿ ಸೆಣಸಾಡಲಿವೆ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now