ನ್ಯೂಝಿಲೆಂಡ್ ವಿರುದ್ಧ ನಡೆಯುತ್ತಿರುವ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ ಆಕರ್ಷಕ ಅರ್ಧಶತಕ ಬಾರಿಸಿದೆ. ಈ ಅರ್ಧಶತಕದೊಂದಿಗೆ ಇಂಗ್ಲೆಂಡ್ ತಂಡದ ದ್ವಿತೀಯ ಇನಿಂಗ್ಸ್ ಸ್ಕೋರ್ 350ರ ಗಡಿದಾಟಿದ್ದು, ಒಟ್ಟು ಮುನ್ನಡೆ 500 ರನ್ಗಳನ್ನು ದಾಟಿದೆ.
ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್ ಮತ್ತೊಂದು ಮೈಲುಗಲ್ಲು ದಾಟಿದ್ದಾರೆ. ಅದು ಕೂಡ 50+ ಸ್ಕೋರ್ಗಳಿಸುವುದರಲ್ಲಿ ಶತಕ ಪೂರೈಸುವ ಮೂಲಕ ಎಂಬುದು ವಿಶೇಷ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ
ವೆಲ್ಲಿಂಗ್ಟನ್ನಲ್ಲಿ ನಡೆಯುತ್ತಿರುವ ನ್ಯೂಝಿಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ನಲ್ಲಿ ಜೋ ರೂಟ್ 76 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಧಿಕ ಬಾರಿ 50+ ಸ್ಕೋರ್ಗಳಿಸಿದ ವಿಶ್ವದ ನಾಲ್ಕನೇ ಬ್ಯಾಟರ್ ಎನಿಸಿಕೊಂಡರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now