ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡದ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡುವ ಅವಕಾಶ ಪಡೆದ ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಶತಕ ಸಿಡಿಸಿದ್ದಾರೆ. ಇತ್ತ ಟೀಮ್ ಇಂಡಿಯಾ ಪರ ಜಸ್ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸಿದ್ದಾರೆ
ದ್ವಿತೀಯ ದಿನದಾಟದ ಆರಂಭದಲ್ಲೇ ಉಸ್ಮಾನ್ ಖ್ವಾಜಾ (21) ವಿಕೆಟ್ ಕಬಳಿಸಿ ಶುಭಾರಂಭ ಮಾಡಿದ ಬುಮ್ರಾ, ಆ ಬಳಿಕ ನಾಥನ್ ಮೆಕ್ಸ್ವೀನಿ (9) ವಿಕೆಟ್ ಪಡೆದರು. ಇದಾದ ಬಳಿಕ ಸ್ವೀವ್ ಸ್ಮಿತ್ (101) ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾದರು. ಆ ಬಳಿಕ ಬಂದ ಮಿಚೆಲ್ ಮಾರ್ಷ್ 5 ರನ್ಗಳಿಸಿ ಔಟಾದರು. ಇದರ ಬೆನ್ನಲ್ಲೇ ಟ್ರಾವಿಸ್ ಹೆಡ್ (152) ಕೂಡ ಬುಮ್ರಾಗೆ ವಿಕೆಟ್ ಒಪ್ಪಿಸಿದರು.
ಈ 5 ವಿಕೆಟ್ಗಳೊಂದಿಗೆ ವಿದೇಶಿ ಟೆಸ್ಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಬಾರಿ 5 ವಿಕೆಟ್ ಕಬಳಿಸಿದ ಭಾರತದ ವೇಗಿ ಎಂಬ ದಾಖಲೆಯನ್ನು ಜಸ್ಪ್ರೀತ್ ಬುಮ್ರಾ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಭಾರತದ ಮಾಜಿ ನಾಯಕ ಕಪಿಲ್ ದೇವ್ ಹೆಸರಿನಲ್ಲಿತ್ತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now