ಉಡುಪಿ, ಜೂನ್ 12 : ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ ಗೌರವಧನ ಆಧಾರದಲ್ಲಿ 8, 9 ಹಾಗೂ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಇಂಗ್ಲಿಷ್ ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಮತ್ತು ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರ ನೇಮಕಾತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 18 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಬಿ ಬ್ಲಾಕ್, ಒಂದನೇ ಮಹಡಿ, ಜಿಲ್ಲಾಧಿಕಾರಿಗಳ ಕಛೇರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ದೂರವಾಣಿ ಸಂಖ್ಯೆ: 0820-2574946 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ. ಸ್ಥಳೀಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now