
ಉಡುಪಿ 22 ಫೆಬ್ರವರಿ 2025: ದಿನಾಂಕ 19/02/2025 ರಂದು ಶಾಲಾ ಶಿಕ್ಷಣ ಇಲಾಖೆ ಮತ್ತು ಸಮಗ್ರ ಶಿಕ್ಷಣ ಕರ್ನಾಟಕ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬ್ರಹ್ಮಾವರ , ಸಮೂಹ ಸಂಪನ್ಮೂಲ ಕೇಂದ್ರ ಕುಕ್ಕೆಹಳ್ಳಿ ಹಾಗೂ ಪಿ.ಎಂ.ಶ್ರೀ. ಸ.ಹಿ.ಪ್ರಾ.ಶಾಲೆ ಕುಕ್ಕೆಹಳ್ಳಿ ಇವರ ಸಹಭಾಗಿತ್ವದಲ್ಲಿ ಕುಕ್ಕೆಹಳ್ಳಿ ಕ್ಲಸ್ಟರ್ ಮಟ್ಟದ FLN ಕಲಿಕಾ ಹಬ್ಬವು ನಡೆಯಿತು. ಕುಕ್ಕೆಹಳ್ಳಿ ಕ್ಲಸ್ಟರಿನ ವಿವಿಧ ಶಾಲೆಗಳಿಂದ ಮಕ್ಕಳು, ಪೋಷಕರು ಹಾಗೂ ಶಿಕ್ಷಕರು FLN ಕಲಿಕಾ ಹಬ್ಬದಲ್ಲಿ ಭಾಗವಹಿಸಿದ್ದರು.







ಪೋಷಕರು ಹಾಗೂ ಸಮುದಾಯದ ಸದಸ್ಯರನ್ನೊಳಗೊಂಡು ಸಂತಸದಾಯಕ ಕಲಿಕೆಯ ವಾತಾವರಣವನ್ನು ನಿರ್ಮಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಕಲಿಕೆ ಉತ್ತಮಗೊಳ್ಳಲು ಸಹಕಾರಿಯಾಗುತ್ತದೆ ಎಂದು ಕಾರ್ಯಕ್ರಮವನ್ನು ಉದ್ಘಾಟಿಸಿದ ಕುಕ್ಕೆಹಳ್ಳಿ ಗ್ರಾಮಪಂಚಾಯತ್ ನ ಅಧ್ಯಕ್ಷರಾದ ಪುರಂದರ ಕೋಟ್ಯಾನ್ ಅಭಿಪ್ರಾಯ ಪಟ್ಟರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು SDMC ಉಪಾಧ್ಯಕ್ಷರಾದ ರವೀಂದ್ರ ಕೊಳಲಗಿರಿ ಇವರು ವಹಿಸಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಕಲಿಕಾ ಹಬ್ಬದ ನೋಡಲ್ ಅಧಿಕಾರಿ ಶ್ರೀ ಉದಯ್ ಕೋಟ ಇವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸ್ಥಳೀಯ ಜನಪ್ರತಿನಿಧಿ ಶಂಕರ ಸಾಲ್ಯಾನ್ SDMCಯ ವಿಶ್ವನಾಥ ಬೆಳ್ಳಂಪಳ್ಳಿ, ದೂಪದಕಟ್ಟೆ ಶಾಲಾ ಮುಖ್ಯ ಶಿಕ್ಷಕ ಗೋಪಾಲ ನಾಯ್ಕ್ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾದ ಮುರಳೀಧರ ,ರಾಮಚಂದ್ರ ವಾಕುಡ ,ಸವಿತಾ ಕುಮಾರಿ, ಸುರೇಖಾ ,ಶಾರದಾ, ವಿನಯಕುಮಾರಿ, ರಮಣಿ, ತೇಜಸ್ವಿನಿ ,ಉಷಾ, ಕಲಿಕಾ ಕಾರ್ನರ್ ಗಳಲ್ಲಿ ಚಟುವಟಿಕೆ ನಡೆಸಿದರು. ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಶಾಂತಾ ಕಲಿಕಾ ಹಬ್ಬದ ಸಂಪೂರ್ಣ ಜವಾಬ್ದಾರಿಯೊಂದಿಗೆ ಉತ್ತಮವಾಗಿ ಕಾರ್ಯಕ್ರಮ ನಡೆಸಿಕೊಟ್ಟರು. ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಸರಸ್ವತಿ ಸ್ವಾಗತಿಸಿದರು. ದೈಹಿಕ ಶಿಕ್ಷಕ ಶ್ರೀ ಗಣೇಶ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಶ್ರೀಮತಿ ಜ್ಯೋತಿಕಲಾ ವಂದಿಸಿದರು. ಶಾಲಾ ಅಧ್ಯಾಪಕರು, ಶಾಲಾಭಿವೃದ್ಧಿ ಸಮಿತಿಯ ಸದಸ್ಯರು, ಪೋಷಕರು, ಶಾಲಾ ಸಿಬ್ಬಂದಿಗಳು ಉಪಸ್ಥಿತರಿದ್ದು ಸಹಕರಿಸಿದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























