ವಿಶ್ವಕಪ್‌ನಿಂದ ಹೊರಬಿದ್ದ ಬ್ರೆಜಿಲ್.. ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಹೇಳಿದ ನೇಮಾರ್

ವಿಶ್ವಕಪ್‌ನಿಂದ ಹೊರಬಿದ್ದ ಬ್ರೆಜಿಲ್.. ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ವಿದಾಯ ಹೇಳಿದ ನೇಮಾರ್
0Shares

ನ್ಯೂಜೆರ್ಸಿ: 2026ರ ಫಿಫಾ ವಿಶ್ವಕಪ್‌ನ ಪ್ರಿ-

ಕ್ವಾರ್ಟ‌್ರಫೈನಲ್ (ಸುತ್ತು-16) ಪಂದ್ಯದಲ್ಲಿ ನಾರ್ವೆ ವಿರುದ್ಧ ಬ್ರೆಜಿಲ್ ತಂಡ ಆಘಾತಕಾರಿ ಸೋಲು ಅನುಭವಿಸಿದೆ. ಈ ಬೆನ್ನಲ್ಲೇ ಬ್ರೆಜಿಲ್‌ನ ಸ್ಟಾರ್ ಆಟಗಾರ ನೇಮಾ‌ರ್ ಜೂನಿಯ‌ರ್ ಅಂತಾರಾಷ್ಟ್ರೀಯ ಫುಟ್‌ಬಾಲ್‌ಗೆ ದಿಢೀ‌ರ್ ನಿವೃತ್ತಿ ಘೋಷಿಸಿದ್ದಾರೆ.

ಮೆಟ್‌ಲೈಫ್‌ ಸ್ಟೇಡಿಯಂನಲ್ಲಿ ನಡೆದ ರೋಚಕ ಪಂದ್ಯದಲ್ಲಿ ನಾರ್ವೆ ತಂಡ 2-1 ಗೋಲುಗಳ ಅಂತರದಿಂದ ಬ್ರೆಜಿಲ್‌ಗೆ ಮಣ್ಣು ಮುಕ್ಕಿಸಿತು. ಪಂದ್ಯದ ಕೊನೆಯ ಕ್ಷಣದಲ್ಲಿ ಬ್ರೆಜಿಲ್ ಪರ ನೇಮಾ‌ರ್ ಪೆನಾಲ್ಟಿ ಮೂಲಕ ಏಕೈಕ ಗೋಲು ಗಳಿಸಿದರಾದರೂ ತಂಡವನ್ನು ಸೋಲಿನಿಂದ ರಕ್ಷಿಸಲು ಸಾಧ್ಯವಾಗಲಿಲ್ಲ.

ಗಾಯದ ಸಮಸ್ಯೆಯಿಂದ ವಿಶ್ವಕಪ್ ಆರಂಭದ ಕೆಲವು ಪಂದ್ಯಗಳನ್ನು ತಪ್ಪಿಸಿದ್ದ ನೇಮರ್, ಬಳಿಕ ಸಂಪೂರ್ಣ ಫಿಟ್ ಆಗಿ ತಂಡಕ್ಕೆ ಮರಳಿದರೂ, ಮುಖ್ಯವಾಗಿ ಬದಲಿ ಆಟಗಾರನಾಗಿ ಅವಕಾಶ ಪಡೆದಿದ್ದರು.

ಪಂದ್ಯದ ಮುಕ್ತಾಯದ ನಂತರ ಕಣ್ಣೀರು ಹಾಕುತ್ತಾ ಮಾತನಾಡಿದ ನೇಮಾರ್, “ನಾನು ಸಾಕಷ್ಟು ಪ್ರಯತ್ನಿಸಿದೆ, ಆದರೆ ನನ್ನ ಪಯಣ ಇಲ್ಲಿಗೆ ಮುಗಿದಿದೆ. ನಾನು ಎಲ್ಲಿಂದ ವೃತ್ತಿಜೀವನ ಆರಂಭಿಸಿದ್ದನೋ ಅಲ್ಲೇ ಅದನ್ನು ಕೊನೆಗೊಳಿಸುತ್ತಿದ್ದೇನೆ” ಎಂದು ಭಾವುಕರಾಗಿ ನುಡಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now