
ಸಿದ್ದಾಪುರ: ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆದ 17 ವರ್ಷದೊಳಗಿನ ಶಾಲಾ ಬಾಲಕರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ವಾಟಗಾರದ ವಿದ್ಯಾರ್ಥಿ ಹೃತೀಶ್ ಮಂಜುನಾಥ ನಾಯ್ಕ ಅವರು ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ 47 ಮೀಟರ್ ದೂರ ಎಸೆದು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿದ್ದಾರೆ.
ಈ ಸಾಧನೆಯೊಂದಿಗೆ ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಶಾಲಾ ಕ್ರೀಡಾಕೂಟಕ್ಕೆ ಕರ್ನಾಟಕ ತಂಡದಿಂದ ಆಯ್ಕೆಯಾಗಿದ್ದಾರೆ.
ಇತ್ತೀಚೆಗೆ ನಡೆದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ 51 ಮೀಟರ್ ದೂರ ಹ್ಯಾಮರ್ ಎಸೆದು ಪ್ರಥಮ ಹಾಗೂ ಡಿಸ್ಕಸ್ ಥ್ರೋನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದರು. ಹೃತೀಶ್ ಅವರಿಗೆ ತರಬೇತುದಾರ ಹರ್ಷ ಚಂದಾವರಕರ್ ಮಾರ್ಗದರ್ಶನ ನೀಡಿದ್ದಾರೆ.
ಗ್ರಾಮೀಣ ಪ್ರತಿಭೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು, ತರಬೇತುದಾರರು ಹಾಗೂ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now