ಕಾಮನ್‌ವೆಲ್ತ್ ಕ್ರೀಡಾಕೂಟ 2026: ಎರಡನೇ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಮುರಳಿ ಶ್ರೀಶಂಕರ್!

ಕಾಮನ್‌ವೆಲ್ತ್ ಕ್ರೀಡಾಕೂಟ 2026: ಎರಡನೇ ಪದಕ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ ಮುರಳಿ ಶ್ರೀಶಂಕರ್!
0Shares

ಗ್ಲಾಸ್ಕೋ: ಭಾರತದ ತಾರಾ ಲಾಂಗ್ ಜಂಪ್ ಪಟು ಮುರಳಿ ಶ್ರೀಶಂಕ‌ರ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಮತ್ತೊಮ್ಮೆ ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಗ್ಲಾಸ್ಕೋದಲ್ಲಿ ನಡೆಯುತ್ತಿರುವ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಕ್ಕುವ ಮೂಲಕ, ಕಾಮನ್‌ವೆಲ್ತ್ ಗೇಮ್ಸ್‌ನ ಲಾಂಗ್ ಜಂಪ್ ವಿಭಾಗದಲ್ಲಿ ಸತತ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಅಥೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

2022ರ ಬರ್ಮಿಂಗ್‌ಹ್ಯಾಮ್ ಕಾಮನ್‌ವೆಲ್ತ್ ಕೂಟದಲ್ಲಿ ಬೆಳ್ಳಿ ಪದಕ ಗೆದ್ದಿದ್ದ 27 ವರ್ಷದ ಶ್ರೀಶಂಕರ್, ಈ ಬಾರಿಯೂ 8.09 ಮೀಟರ್ ದೂರ ಜಿಗಿದು ಎರಡನೇ ಸ್ಥಾನದೊಂದಿಗೆ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು. 2024ರಲ್ಲಿ ಮಂಡಿ ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾಗಿ, ವೃತ್ತಿಜೀವನವೇ ಅಂತ್ಯವಾಯಿತು ಎನ್ನುವ ಹಂತದಿಂದ ಕಂಬ್ಯಾಕ್ ಮಾಡಿ ಈ ಪದಕ ಗೆದ್ದಿರುವುದು ಅವರ ಅದಮ್ಯ ಚೇತನಕ್ಕೆ ಸಾಕ್ಷಿಯಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now