
ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಆಶ್ರಯದಲ್ಲಿ ಕೃಷಿಗೆ ಸರ್ಕಾರದಿಂದ ಸಿಗುವ ಸವಲತ್ತುಗಳ ಕುರಿತು ಮಾಹಿತಿ ಕಾರ್ಯಕ್ರಮವು ಆದಿತ್ಯವಾರ ದಿನಾಂಕ 20 ಜುಲೈ 2025 ರಂದು ಗಂಗೊಳ್ಳಿಯ ಕೊಸೆಸಾಂವ್ ಮಾತೆ ಚರ್ಚಿನ ಸಂತ ಜೋಸೆಫ್ ವಾಜ್ ಸಭಾಭವನದಲ್ಲಿ ಜರುಗಿತು.

ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ರವರು ಅಧ್ಯಕ್ಷತೆ ವಹಿಸಿದಂತಹ ಕಾರ್ಯಕ್ರಮದಲ್ಲಿ ಶ್ರೀ ಎಲ್ರಾಯ್ ಕಿರನ್ ಕ್ರಾಸ್ಟೊ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ , ಸ್ಕಾಡ್ ಹಾಗೂ ಈಸಿ ಲೈಫ್ ಸಂಸ್ಥೆಗಳಲ್ಲಿ ಕೃಷಿಕರಿಗೆ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿ, ಇಲಾಖೆಗಳಿಂದ ಸಿಗುವ ವಿವಿಧ ಸವಲತ್ತುಗಳ ಸದುಪಯೋಗವನ್ನು ಬಳಸಿಕೊಳ್ಳಲು ಕರೆ ನೀಡಿದರು. ಮಾಹಿತಿ ಕಾರ್ಯಕ್ರಮದ ನಂತರ ಮುಕ್ತ ಸಂವಾದ ಕಾರ್ಯಕ್ರಮ ನಡೆಯಿತು.
ಕಥೊಲಿಕ್ ಸಭಾ ಉಡುಪಿ ಪ್ರದೇಶ್ (ರಿ) ಗಂಗೊಳ್ಳಿ ಘಟಕದ ಅಧ್ಯಕ್ಷರಾದ ಶ್ರೀ ಎಡ್ವರ್ಡ್ ಫೆರ್ನಾಂಡಿಸ್ ಸ್ವಾಗತಿಸಿದರೆ , ಕಾರ್ಯದರ್ಶಿಯವರಾದ ಶ್ರೀ ಸೈಮನ್ ಡಿಸೋಜ ವಂದನಾರ್ಪಣೆ ಗೈದರು.



Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now
























