
ಉಡುಪಿ : ಗೋವಾದ ಕ್ಯಾಲಂಗುಟ್ ಬೀಚ್ ನ ಲಾಡ್ಜ್ ವೊಂದರಲ್ಲಿ ಮಲ್ಪೆಯ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ ಎಂದು ಮಾಹಿತಿ ತಿಳಿದು ಬಂದಿದೆ.
ಮೃತಪಟ್ಟ ಯುವಕ ಉಡುಪಿ ಮಲ್ಪೆಯ ಸಂದೀಪ್ ಸಾಲ್ಯಾನ್ ಎಂದು ತಿಳಿಯಲಾಗಿದೆ. ಸಂದೀಪ್ ಎರಡು ದಿನದ ಹಿಂದೆ ಸ್ನೇಹಿತರ ಜೊತೆ ಗೋವಾಕ್ಕೆ ಪ್ರವಾಸಕ್ಕೆ ಹೋಗಿದ್ದ. ಜೂ. 30 ರಂದು ಸಂಜೆ ಆತ ಲಾಡ್ಜ್ ನಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದಾನೆ ಎಂಬ ಮಾಹಿತಿ ದೊರಕಿದೆ.
ಈ ಸಾವು ಹೃದಯಾಘಾತದಿಂದ ಆಗಿದೆಯೋ ಅಥವಾ ಕೊಲೆಯೋ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬರಬೇಕಿದೆ.
ಸಂದೀಪ್ ಕೆಲವು ವರ್ಷಗಳ ಹಿಂದೆ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಜೊತೆಗೆ ಕೆಲಸ ಮಾಡುತ್ತಿದ್ದರು. ಇತ್ತೀಚೆಗೆ ಮಲ್ಪೆ ಬೀಚ್ ನಲ್ಲಿ ಟೂರಿಸ್ಟ್ ಬೋಟ್ ನಡೆಸುತ್ತಿದ್ದ ಎನ್ನಲಾಗಿದೆ.
ಸಂದೀಪ್ ಬಹಳ ಸ್ನೇಹ ಜೀವಿಯಾಗಿದ್ದ ಮತ್ತು ಸಮಾಜ ಸೇವೆಯ ಕೆಲಸಗಳನ್ನು ಮಾಡುತ್ತಿದ್ದರು. ಸಂದೀಪ್ ಸಾವಿನ ಸುದ್ದಿ ತಿಳಿದು ಮಲ್ಪೆಯ ಸ್ನೇಹಿತರು ಬಹಳ ಬೇಸರ ವ್ಯಕ್ತಪಡಿಸಿದ್ದಾರೆ. ಹಾಗೂ ಸಂಶಯಾಸ್ಪದ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
ನಮ್ಮ ವರದಿಗಾರರು
ಸ್ಟೀವನ್ ಕುಲಾಸೊ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now