ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

ಗುಂಡ್ಯದಲ್ಲಿ ಖಾಸಗಿ ಬಸ್ ಪಲ್ಟಿ : ಹಲವರಿಗೆ ಗಾಯ

0Shares

ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ನಸುಕಿನ ವೇಳೆ ಖಾಸಗಿ ಬಸ್‌ ಪಲ್ಟಿಯಾಗಿ ಹಲವಾರು ಪ್ರಯಾಣಿಕರು ಗಾಯಗೊಂಡ ಘಟನೆ ಜೂ.7 ರಂದು ನಡೆದಿದೆ.

ಬೆಂಗಳೂರಿನಿಂದ ಪುತ್ತೂರಿಗೆ ಬರುತ್ತಿದ್ದ Mercy ಹೆಸರಿನ ಖಾಸಗಿ ಬಸ್ ಸುಮಾರು 3:30 ರ ವೇಳೆ ಗುಂಡ್ಯ ಸಮೀಪ ತಲುಪುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಬ್ಬರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.

ಈ ಘಟನೆಯಲ್ಲಿ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಚಾಲಕ ಸೇರಿದಂತೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಪ್ರಯಾಣಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now