ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಇನ್ಟಿಕ್ಟಸ್ 2026

ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಇನ್ಟಿಕ್ಟಸ್ 2026
0Shares

ಗುರುಕುಲ ಪದವಿ ಪೂರ್ವ ಕಾಲೇಜಿನಲ್ಲಿ ಇನ್ವಿಕ್ಟಸ್ 2026ರ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡೆಯೂ ಕೂಡ ಒಂದು ಅಂಗವಾದ ಈ ಕಾರ್ಯಕ್ರಮವನ್ನು ಬಾಂಡ್ಯಾ ಎಜುಕೇಶನಲ್ ಟ್ರಸ್ಟ್ ನ ಜಂಟಿ ಕಾರ್ಯನಿರ್ವಾಹಕ ಸುಭಾಶ್ಚಂದ್ರ ಶೆಟ್ಟಿ ವಿದ್ಯಾರ್ಥಿ ತಂಡಗಳ ನಾಯಕರಿಗೆ ಜರ್ಸಿ ನೀಡುವುದರ ಮೂಲಕ ಉದ್ಧಾಟಿಸಿ ಮಾತನಾಡುತ್ತಾ ಕ್ರೀಡೆ ವಿದ್ಯಾರ್ಥಿಗಳಲ್ಲಿ ದೈಹಿಕ ಸಾಮರ್ಥ್ಯ ಹೆಚ್ಚಿಸುವುದರೊಂದಿಗೆ ಬೌದ್ಧಿಕವಾಗಿಯೂ ಸುದೃಢವಾದ ಬೆಳವಣಿಗೆಯನ್ನು ಹುಟ್ಟು ಹಾಕುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಯೂ ಕ್ರೀಡಾಸಕ್ತ ಮನೋಭಾವ ಬೆಳೆಸಿಕೊಳ್ಳಬೇಕೆಂದು ವಿದ್ಯಾರ್ಥಿಗಳಿಗೆ ಶುಭ ಕೋರಿದರು. ಬಾಂಡ್ಯಾ ಎಜುಕೇಶನಲ್ ಟ್ರಸ್ಟನ ಜಂಟಿ ಕಾರ್ಯನಿರ್ವಾಹಕರಾದ ಅನುಪಮಾ ಎಸ್ ಶೆಟ್ಟಿಯ ಗೌರವ ಉಪಸ್ಥಿತಿಯಿಂದ ಮಾತನಾಡುತ್ತಾ – ವ್ಯಕ್ತಿಯ ಪರಿಪೂರ್ಣವಾದ ಬೆಳವಣಿಗೆಗೆ ದೈಹಿಕ, ಮಾನಸಿಕ,ನೈತಿಕಾಂಶಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ನಮ್ಮ ನಾಡು ಕ್ರೀಡೆಯಲ್ಲಿ ಇನ್ನಷ್ಟು ಸಾಧನೆಯನ್ನು ಮೆರೆಯಬೇಕು. ಸಮಾನತೆಯನ್ನು ಹುಟ್ಟು ಹಾಕುವ ಕ್ರೀಡೆಗೆ ತಾವು ತೊಡಗಿಕೊಂಡು ಯಶಸ್ಸುಗಳಿಸಿ ಎಂದು ಶುಭ ಕೋರಿದರು. ಪ್ರಾಂಶುಪಾಲ ಸಂದೀಪ್ ನಾಯ್ಕ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕುಮಾರಿ ಅಧಿತಿ ಪಟೇಲ್ ಕಾರ್ಯಕ್ರಮ ನಿರ್ವಹಿಸಿದ್ದು, ಕುಮಾರಿ ಅರ್ಚನಾ ಪ್ರಾರ್ಥಿಸಿದರು. ಕುಮಾರಿ ಕೀರ್ತನ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now