ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ಪ್ರೊಬೆಷನರಿ ಐಪಿಎಸ್​ ಅಧಿಕಾರಿ ಭೀಕರ ಅಪಘಾತದಲ್ಲಿ ಸಾವು

0Shares

ಹಾಸನ ತಾಲೂಕಿನ ಕಿತ್ತಾನೆಗಡಿ ಬಳಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಪ್ರೊಬೇಷನರಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ (26) ಅವರು ಡಿಸೆಂಬರ್ 1 ರಂದು ನಿಧನರಾಗಿದ್ದಾರೆ. ಮೈಸೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ವೇಳೆ ಅವರ ಜೀಪ್ ಪಲ್ಟಿಯಾಗಿತ್ತು. ಅವರು 2022 ರ ಯುಪಿಎಸ್ಸಿ ಪರೀಕ್ಷೆಯಲ್ಲಿ 153ನೇ ರ್ಯಾಂಕ್ ಪಡೆದು ಐಪಿಎಸ್ ಆಗಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.

ಮೂಲತಃ ಬಿಹಾರ ಮೂಲದ ಹರ್ಷಬರ್ಧನ ಮದ್ಯಪ್ರದೇಶದ ಸಿಂಗ್ರುಲಿಯಲ್ಲಿ ವಾಸವಾಗಿದ್ದರು. ಅಖಿಲೇಶ್ ಕುಮಾರ್ ಸಿಂಗ್ ಹಾಗೂ ಡೋಲಿ ಸಿಂಗ್ ದಂಪತಿಯ ಪುತ್ರ ಹರ್ಷವರ್ಧನ. ರಾಜ್ಯ ಆಡಳಿತ ಸೇವೆಯಲ್ಲಿರುವ ಸರ್ಕಾರಿ ನೌಕರನ ಮಗನಾಗಿದ್ದ ಹರ್ಷವರ್ಧನ್​ ಸಿವಿಲ್ ಇಂಜಿನಿಯರಿಂಗ್ ಪದವಿಧರರಾಗಿದ್ದರು. ಸರ್ಕಾರಿ ಕೆಲಸಕ್ಕೂ ಸೇರಿಕೊಂಡಿದ್ದರು. ಆದರೆ, ಜೀವನದ ಗುರಿ ಬೇರೆಯೇ ಆಗಿತ್ತು. 2022ರಲ್ಲಿ ಮೊದಲ ಯತ್ನದಲ್ಲೇ ಯುಪಿಎಸ್​​​ಸಿಯಲ್ಲಿ 153ನೇ ರ‍್ಯಾಂಕ್ ಪಡೆದಿದ್ದರು. ​

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now