
ಹಾಸನ : ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕೋನಹಳ್ಳಿ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ನಡೆದಿದೆ.
ಘಟನೆ ಪರಿಣಾಮ ಲಾರಿಯಲ್ಲಿದ್ದ ಕ್ಲೀನರ್ ಮೃತಪಟ್ಟಿದ್ದು ಚಾಲಕನಿಗೆ ಗಾಯಗಳಾಗಿದೆ.
ಮೃತರನ್ನು ಮಂಗಳೂರಿನ ಸಲ್ಮಾನ್ ಫಾರಿಶ್ (18) ಎಂದು ಗುರುತಿಸಲಾಗಿದೆ.
ಕಲ್ಲಡ್ಕ ಮೂಲದ ಫಾಹಾದ್ ಎಂಬವರು ಚಾಲಕರಗಿದ್ದ ಪ್ರೈವುಡ್ ತುಂಬಿದ್ದ ಲಾರಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ ಎನ್ನಲಾಗಿದೆ.
ಲಾರಿ ಚಾಲಕನಿಗೆ ಸಣ್ಣ ಪುಟ್ಟ ಗಾಯವಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ພ໖໖.
ಸ್ಥಳಕ್ಕೆ ಚನ್ನರಾಯಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now























