ಉಡುಪಿ, ನವೆಂಬರ್ 27: ಉಡುಪಿ ಜಿಲ್ಲಾ ರೆಡ್ಕ್ರಾಸ್ ಘಟಕ, ಪ್ರೌಚ್ಯ ತೌಳವ ಕರ್ಣಾಟ : ಕುಕ್ಕೆ ಶ್ರೀ ನಿಕೇತನ ಸಂಗ್ರಹಾಲಯ ಮತ್ತು ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠ ಮೂಡಬಿದರೆ, ಜೈನ ಮಠ ಪ್ರಾಚ್ಯ ಸಂಚಯ ಸಂಶೋಧನ ಕೇಂದ್ರ ಉಡುಪಿ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಂಯುಕ್ತ ಆಶ್ರಯದಲ್ಲಿ ಹೆಬ್ರಿಯ ಚಾರದ ಪ್ರಾಚೀನ ಐತಿಹಾಸಿಕ ಬಸದಿಯ ಸ್ವಚ್ಛತಾ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ಮೂಡಬಿದರೆಯ ಜೈನ ಮಠದ ಡಾ. ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯ ಸ್ವಾಮೀಜಿಯವರು ಮಾತನಾಡಿ, ಉಡುಪಿ ಜಿಲೆಯಲ್ಲಿ ಐತಿಹಾಸಿಕ ಸ್ಥಳಗಳನ್ನು ರಕ್ಷಣೆ ಮಾಡುವ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮ ಅಗತ್ಯ. ಸಾವಿರಾರು ವರ್ಷಗಳ ಇತಿಹಾಸ ಇರುವ ಇಂತಹ ಪ್ರಾಚೀನ ಕೇಂದ್ರಗಳ ಬಗ್ಗೆ ಅರಿವು ಮೂಡಿಸುವುದೇ ನಿಜವಾದ ಸಂಸ್ಕೃತಿ ನಿಜವಾದ ರಕ್ಷಣೆ ಎಂದ ಅವರು, ಸಂಘಟಣೆಗಳ ಈ ಕಾರ್ಯ ಶ್ಲಾಘನೀಯ ಎಂದರು.
ಕುಕ್ಕೆ ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠದ ನಿರ್ದೇಶಕ ಡಾ. ಜಿ.ವಿ. ಕಲ್ಲಾಪುರೆ, ಉಡುಪಿ ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು, ಪ್ರಾಚ್ಯ ಸಂಚಯ ಸಂಶೋಧನಾ ಕೇಂದ್ರದ ನಿರ್ದೇಶಕ ಎಸ್. ಎ. ಕೃಷ್ಣಯ್ಯ, ಡಾ. ಗಣೇಶ ಪ್ರಸಾದ್ ನಾಯಕ್, ಪುನೀತ್, ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಪ್ರಾಂಶುಪಾಲ ಡಾ. ವಿದ್ಯಾಧರ ಶೆಟ್ಟಿ. ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಬಾಲರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಕೆಳದಿ ರಾಣಿ ಚೆನ್ನಮ್ಮಾಜಿ ಅಧ್ಯಯನ ಪೀಠದ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಸರಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇಲ್ಲಿನ ರೆಡ್ಕ್ರಾಸ್ ಎನ್.ಎಸ್.ಎಸ್ ಮತ್ತು ರೋರ್ಸ್ ರೇಂಜರ್ಸ್ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now