ಕಾರ್ಯಾಗಾರ ಪೋಕ್ಸೋಕಾಯ್ದೆ , ಪರಿಣಾಮಗಳ ಅರಿವು ಅಗತ್ಯ

ಕಾರ್ಯಾಗಾರ ಪೋಕ್ಸೋಕಾಯ್ದೆ , ಪರಿಣಾಮಗಳ ಅರಿವು ಅಗತ್ಯ

0Shares

ವೈದ್ಯಾಧಿಕಾರಿ, ಶುಶ್ರೂಷಣಾಧಿಕಾರಿಗಳಿಗೆ ಪೋಕ್ಸೋ ಕಾಯ್ದೆ: ಕಾರ್ಯಾಗಾರ ಪೋಕ್ಸೋ ಕಾಯ್ದೆ, ಪರಿಣಾಮಗಳ ಅರಿವು ಅಗತ್ಯ

ಪೋಕ್ಸೋ ಕಾಯ್ದೆ, ಪರಿಣಾಮಗಳ ಬಗ್ಗೆ ಸಾರ್ವಜನಿಕರು ಅರಿವು ಮೂಡಿಸಿಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶೆ ಶೋಭಾ ಬಿ.ಜಿ. ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಸಕ್ಷಮ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಣಾಧಿಕಾರಿಗಳಿಗೆ ಪೋಕ್ಸೋ ಕಾಯ್ದೆ ಕುರಿತು ನಗರದ ವೆನ್ಲಾಕ್ ಆಸ್ಪತ್ರೆಯ ಆರ್.ಎ.ಪಿ.ಸಿ.ಸಿ. ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಜಿಲ್ಲೆಯ ಹಲವು ಕಡೆಗಳಲ್ಲಿ ಪೋಕ್ಸೋ ಪ್ರಕರಣಗಳು ನಡೆಯುತ್ತಲೇ ಇದ್ದು, ಇಂತಹ ಅಪರಾಧ ಪ್ರಕರಣಗಳನ್ನು ಬಗೆಹರಿಸಲು ಜಿಲ್ಲೆಯಲ್ಲಿ ಪೋಕ್ಸೋ ಸಂಭಂದಿತ ಸಮಿತಿಗಳು ಹಾಗೂ ನ್ಯಾಯಾಲಯಗಳಿವೆ.

ಯಾವ ಕೋರ್ಟ್‍ನಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆಯೋ ಅಲ್ಲಿಯೇ ಸಂತ್ರಸ್ಥರಿಗೆ ಪರಿಹಾರ ನೀಡುವ ವ್ಯವಸ್ಥೆ ಜಾರಿಯಲ್ಲಿದೆ ಎಂದರು. ಶಾಲಾ-ಕಾಲೇಜು ಮಕ್ಕಳಿಗೆ ಮಾಹಿತಿ ನೀಡಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಚ್. ಆರ್. ತಿಮ್ಮಯ್ಯ ಮಾತನಾಡಿ, ಜಿಲ್ಲೆಯಲ್ಲಿ ಪೋಕ್ಸೋ ಪ್ರಕರಣಗಳ ಸಂಖ್ಯೆ ಕಡಿಮೆಯಾಗಬೇಕು. ಈ ನಿಟ್ಟಿನಲ್ಲಿ ಶಾಲಾ-ಕಾಲೇಜು ಮಕ್ಕಳಿಗೆ, ಸಾರ್ವಜನಿಕರಿಗೆ, ವೈದ್ಯಾಧಿಕಾರಿಗಳು, ುಶ್ರೂಷಣಾಧಿಕಾರಿಗಳಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದರು. ಕೆ.ಎಂ.ಸಿ. ಮಣಿಪಾಲದ ಸಮುದಾಯ ವೈದ್ಯಕೀಯ ವಿಭಾಗದ ಪ್ರೊಫೇಸರ್ ಹಾಗೂ ವಿಭಾಗ ಮುಖ್ಯಸ್ಥರಾದ ಡಾ. ಅಶ್ವಿನಿ ಕುಮಾರ್, ಫೋರೆನ್ಸಿಕ್ ತಜ್ಞೆ ಡಾ. ಅಪರ್ಣಾ ಜಯಕಲಾ, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ. ಶ್ಯಾಮಲಾ, ಜಿಲ್ಲಾ ಮಕ್ಕಳ ಸಂರಕ್ಷಣಾ ಘಟಕದ ಕಾನೂನು ಸಲಹಾ ತಜ್ಞೆ ಗೌರಿ ಕೆ.ಎಸ್. ಅವರು ಕಾರ್ಯಾಗಾರದಲ್ಲಿ ಮಾಹಿತಿ ನೀಡಿದರು.

ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಮತ್ತು ಅಧೀಕ್ಷಕ ಡಾ. ಶಿವಪ್ರಕಾಶ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್ ಎ., ಸಲಹಾ ಸಮಿತಿ ಅಧ್ಯಕ್ಷೆ ಡಾ. ಅಮೃತ ಭಂಡಾರಿ ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ಕೆ.ಪಿ. ಸ್ವಾಗತಿಸಿ, ಆರ್.ಸಿ.ಎಚ್. ಅಧಿಕಾರಿ ಡಾ. ರಾಜೇಶ್ ಅವರು ಪ್ರಸ್ತಾವಿಕವಾಗಿ ಮಾತನಾಡಿದರು.

ಕುಡುಪು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಚಿರಾಗ್ ಅವರು ವಂದಿಸಿದರು. ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿ ಕೆ. ಉಳಿಪಾಡಿ ಕಾರ್ಯಕ್ರಮ ನಿರೂಪಿಸಿದರು. ಒಟ್ಟು 170 ತಜ್ಞ ವೈದ್ಯರು, ವೈದ್ಯರು ಹಾಗೂ ಶುಶ್ರೂಷಣಾಧಿಕಾರಿಗಳು ಭಾಗವಹಿಸಿದ್ದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now