ಹೆಮ್ಮಾಡಿ: ಸಹಕಾರಿಗಳಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ

ಹೆಮ್ಮಾಡಿ: ಸಹಕಾರಿಗಳಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ
0Shares

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ , ಬೆಂಗಳೂರು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ ಹಾಗೂ ಸಹಕಾರ ಇಲಾಖೆ, ಉಡುಪಿ ಜಿಲ್ಲೆ ಇವರ ಸಂಯುಕ್ತಾಶ್ರದಲ್ಲಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೋದ್ಧೇಶ ಸಹಕಾರ ಸಂಘಗಳ ಅಧ್ಯಕ್ಷರು , ಆಡಳಿತ ಮಂಡಳಿ ಸದಸ್ಯರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಮತ್ಸ್ಯ ಜ್ಯೋತಿ ಸಭಾಂಗಣ, ಹೆಮ್ಮಾಡಿ ಮೀನುಗಾರರ ಪ್ರಾಥಮಿಕ ಸಹಕಾರ ಸಂಘದಲ್ಲಿ ಜರುಗಿತು.
ತರಬೇತಿ ಕಾರ್ಯಕ್ರಮವನ್ನು ಬಿ.ಜಯಕರ ಶೆಟ್ಟಿ ಇಂದ್ರಾಳಿ, ಅಧ್ಯಕ್ಷರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ., ಉಡುಪಿ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು ಉದ್ಘಾಟಿಸಿದರು .
ಮುಖ್ಯ ಅತಿಥಿಗಳಾಗಿ ಶ್ರೀಧರ ಪಿ.ಎಸ್ , ನಿರ್ದೇಶಕರು ,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ,ಉಡುಪಿ ಪ್ರದೀಪ್ ಯಡಿಯಾಳ್ , ನಿರ್ದೇಶಕರು,ಉಡುಪಿ ಜಿಲ್ಲಾ ಸಹಕಾರ ಯೂನಿಯನ್ , ಹೆಮ್ಮಾಡಿ ಮೀನುಗಾರರ ಸಹಕಾರ ಸಂಘ ಇದರ ಅಧ್ಯಕ್ಷ
ರಾಜೀವ್ ಶ್ರೀಯಾನ್ , ಉಪಾಧ್ಯಕ್ಷೆ ಸುಮತಿ ಮೊಗವೀರ ಹಾಗೂ ಪ್ರಧಾನ ವ್ಯವಸ್ಥಾಪಕರಾದ ಉದಯಕುಮಾರ್ ಹಟ್ಟಿಯಂಗಡಿ ಉಪಸ್ಥಿತರಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀಧರ ಪಿ.ಎಸ್ ಸಹಕಾರ ಮತ್ತು ಕಾನೂನು ಹಾಗೂ ಸಹಕಾರ ಸಂಘಗಳಲ್ಲಿ ಮಾನವ ಸಂಪನ್ಮೂಲ ಅಭಿವೃದ್ಧಿ
ಕುರಿತು ಉಪನ್ಯಾಸ ನೀಡಿದರು .
ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ
ಮುಖ್ಯಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಅತಿಥಿಗಳನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು, ಹೆಮ್ಮಾಡಿ ಮೀನುಗಾರರ
ಸಹಕಾರ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಉದಯಕುಮಾರ್ ಹಟ್ಟಿಯಂಗಡಿ ವಂದಿಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now