
ಉಡುಪಿ : ಮಣಿಪಾಲ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ ಫೆಕ್ಟರ್ ಆಗಿದ್ದ ತಿಮ್ಮೇಶ್ ಅವರನ್ನು ಹಿರಿಯಡ್ಕ ಠಾಣೆಯ ಸಬ್ ಇನ್ಸ್ ಫೆಕ್ಟರ್ ಆಗಿ ನಿಯೋಜಿಸಲಾಗಿದೆ.
ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಪ್ರದೀಪ್ ಪೂಜಾರಿ ಪ್ರಕರಣದ ನಿರ್ವಹಣೆಗೆ ಸಂಬಂಧಿಸಿದಂತೆ ಪಿಎಸ್ಐ ಪುನೀತ್ ಅವರನ್ನು ಪಶ್ಚಿಮ ವಲಯ ಐಜಿಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ.
ಇದರಿಂದ ತೆರವಾಗಿದ್ದ ಸ್ಥಾನಕ್ಕೆ ತಿಮ್ಮೇಶ್ ಅವರನ್ನು ನೇಮಕ ಮಾಡಲಾಗಿದೆ.
ಮಲ್ಪೆ, ಕಾಪು, ಅಜೆಕಾರು, ಬೈಂದೂರು ಹಾಗೂ ಮಣಿಪಾಲ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿರುವ ತಿಮ್ಮೇಶ್ ಅವರು ವಿವಿಧ ಕ್ರಿಮಿನಲ್ ಪ್ರಕರಣಗಳನ್ನು ಸಮರ್ಥವಾಗಿ ನಿಭಾಯಿಸಿದ ಅನುಭವ ಹೊಂದಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now