ಶಿರ್ವ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಶಿರ್ವ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
0Shares

ಶಿರ್ವ ಗ್ರಾಮದ ಪೊಲೀಸ್ ಠಾಣೆಯ ಆವರಣದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಡಗರ, ಸಂಭ್ರಮ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಠಾಣಾಧಿಕಾರಿ ಮಂಜುನಾಥ ಮರಬದ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಧ್ವಜಕ್ಕೆ ಗೌರವ ಸಮರ್ಪಿಸಿದರು.

ನಂತರ ಮಾತನಾಡಿದ ಠಾಣಾಧಿಕಾರಿಗಳು, ದೇಶದ ಶಾಂತಿ, ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಮಹತ್ವದ್ದಾಗಿದೆ. ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯೂ ಕರ್ತವ್ಯನಿಷ್ಠೆ, ಪ್ರಾಮಾಣಿಕತೆ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಠಾಣೆಯ 4 ಎಎಸ್ಐ, 10 ಹೆಡ್ ಕಾನ್ಸ್ಟೇಬಲ್, 15 ಪೊಲೀಸ್ ಸಿಬ್ಬಂದಿ ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದು, ಪರಸ್ಪರ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು. ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಮಹನೀಯರನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now