ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ

ಕಲ್ಮಾಡಿ ಚರ್ಚ್: ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ನವದಿನಗಳ ನೊವೆನಾ ಪ್ರಾರ್ಥನೆಗೆ ಚಾಲನೆ
0Shares

ಮಲ್ಪೆ: ಕಲ್ಮಾಡಿಯಲ್ಲಿರುವ ಸ್ಟೆಲ್ಲಾ ಮೇರಿಸ್ ದೇವಾಲಯದ ವೆಲಂಕಣಿ ಆರೋಗ್ಯ ಮಾತೆಯ ಪುಣ್ಯಕ್ಷೇತ್ರ ಪ್ರತಿಷ್ಠಾಪನೆಯ ವಾರ್ಷಿಕ ಮಹೋತ್ಸವದ ಪ್ರಯುಕ್ತ ಪೂರ್ವಭಾವಿಯಾಗಿ ಒಂಬತ್ತು ದಿನಗಳ ನೊವೆನಾ ಪ್ರಾರ್ಥನೆಗೆ ಗುರುವಾರ ಸಂಜೆ ಚಾಲನೆ ನೀಡಲಾಯಿತು.

ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ ಪ್ರವಚನದಲ್ಲಿ ಸಂದೇಶವನ್ನು ನೀಡಿ ಕ್ರೈಸ್ತ ವಿಶ್ವಾಸಿಗಳು ತಮ್ಮ ಉತ್ತಮ ನಡೆ, ಪ್ರೀತಿ, ಮತ್ತು ಸಹಾಯದ ಹಸ್ತದ ಮೂಲಕ ಕ್ರಿಸ್ತನ ಬೆಳಕನ್ನು ಜಗತ್ತಿಗೆ ತೋರಿಸಬೇಕಾಗಿದೆ. ಕ್ರೈಸ್ತ ನಂಬಿಕೆಯಲ್ಲಿ ಶಿಲುಬೆಯು ಮಾನವ ಜೀವನದ ಕೊನೆಯಲ್ಲ, ಬದಲಿಗೆ ಹೊಸ ಜೀವನದ ಮತ್ತು ಪುನರುತ್ಥಾನದ ಆರಂಭವಾಗಿದೆ. ಶಿಲುಬೆಯು ಯೇಸುಕ್ರಿಸ್ತನ ತ್ಯಾಗ, ಕ್ಷಮೆ ಮತ್ತು ಅನಾದಿ ಪ್ರೀತಿಯ ಸಂಕೇತವಾಗಿದೆ. ಇದು ಕಷ್ಟಗಳ ಅಂತ್ಯವಲ್ಲ, ಬದಲಿಗೆ ನಂಬಿಕೆಯ ಹೊಸ ದಾರಿಯಾಗಿದೆ ಎಂದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now