
ಕಾಪು : ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಧೀರಜ್ ಮುನಿರಾಜು, ವಿಧಾನ ಪರಿಷತ್ತಿನ ಸದಸ್ಯ ಮತ್ತು ಜೆಡಿಎಸ್ನ ಶಾಸಕಾಂಗ ಪಕ್ಷದ ಉಪನಾಯಕ ಟಿ. ಎ ಶರವಣ, ತುಮಕೂರು ಜಿಲ್ಲಾ ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕ ಗುಬ್ಬಿ ಶ್ರೀನಿವಾಸ್ (ವಾಸು), ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಶಾಸಕ ಎನ್ ಎಚ್ ಕೋನ ರೆಡ್ಡಿ ಇವರು ಕರ್ನಾಟಕ ವಿಧಾನ ಮಂಡಲದ ಅಧೀನ ಶಾಸನ ರಚನಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಾಗೂ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಮತ್ತು ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಜೊತೆ ಜುಲೈ 23ರಂದು ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ, ಉಚ್ಚಂಗಿ ಸಹಿತ ಮಾರಿಯಮ್ಮ ದೇವಿಯ ದರುಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯ ಅಮ್ಮನ ಅನುಗ್ರಹ ಪ್ರಸಾದ ನೀಡಿದರು.

ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ದೇವಸ್ಥಾನಕ್ಕೆ ಭೇಟಿ ನೀಡಿದ ಶಾಸಕರನ್ನು ಗೌರವಿಸಲಾಯಿತು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗಿಶ್ ವಿ. ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಶೇಖರ ಸಾಲ್ಯಾನ್, ಮಾಧವ ಆರ್. ಪಾಲನ್, ಹುಬ್ಬಳ್ಳಿ ಧಾರವಾಡ ಸಮಿತಿಯ ಪ್ರಧಾನ ಸಂಚಾಲಕ ಸುಗ್ಗಿ ಸುಧಾಕರ್ ಶೆಟ್ಟಿ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತು ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now