ಹೊಸ ವರ್ಷದ ದಿನದಂದು ಜಿಲ್ಲೆಯಲ್ಲಿ ಇರುವ ಎಲ್ಲಾ ಹೈವೇ ಪಟ್ರೋಲ್ / ಹೊಯ್ಸಳ ವಾಹನಗಳು ಕಡ್ಡಾಯವಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಗಸ್ತಿನಲ್ಲಿಡಲಾಗಿದೆ.
• ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರು, ವೀಲಿಂಗ್ ಮಾಡುವವರು ಹಾಗೂ ಇತರೆ ಯಾವುದೇ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
• ದಿನಾಂಕ 31/12/2025ರ ಬೆಳಿಗ್ಗೆ ಕರಾವಳಿ ಪ್ರದೇಶದಲ್ಲಿನ ಸಮುದ್ರ/ಬೀಚ್‌ಗಳಲ್ಲಿ ನಡೆಯುವ ಹೊಸ ವರ್ಷದ ಆಚರಣೆಗಳ ಸುರಕ್ಷತಾ ಕ್ರಮಗಳ ಕುರಿತು ಚರ್ಚಿಸಲು CSP ಠಾಣೆಯ ಅಧಿಕಾರಿಗಳು ಹಾಗೂ ಸಂಬಂಧಿಸಿದ ವ್ಯಾಪ್ತಿಯ ಠಾಣಾಧಿಕಾರಿಗಳ ಸಭೆ ನಡೆಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ.
• ಜಿಲ್ಲೆಯಲ್ಲಿ ಪ್ರತಿ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಹೊಸ ವರ್ಷದ ಆಚರಣೆ ನಡೆಯುವ ಎಲ್ಲಾ ಹೋಂ ಸ್ಟೇಗಳು, ಹೋಟೆಲ್‌ಗಳು, ರೆಸಾರ್ಟ್‌ಗಳು, ಪಬ್‌ಗಳು / ಬಾರ್‌ಗಳನ್ನು ಪರಿಶೀಲಿಸಿ, ಯಾವುದೇ ಅಕ್ರಮ ಚಟುವಟಿಕೆಗಳು (ರೇವ್ ಪಾರ್ಟಿ, ಡ್ರಗ್ ಪಾರ್ಟಿ) ನಡೆಯದಂತೆ ಕಟ್ಟುನಿಟ್ಟಾಗಿ ಕ್ರಮ ಕೈಗೊಳ್ಳಲಾಗುವುದು.
• ಸಾಮಾಜಿಕ ಜಾಲತಾಣಗಳು, ಆನ್‌ಲೈನ್ ಬುಕಿಂಗ್‌ಗಳು, ವೆಬ್ ಪುಟಗಳನ್ನು ಪರಿಶೀಲಿಸಿ ಕಾರ್ಯಕ್ರಮದ ವ್ಯವಸ್ಥೆಗಳ ಕುರಿತು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು.
• ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಬ್‌ಗಳಲ್ಲಿ ವಿಶೇಷವಾಗಿ ಸಾಕಷ್ಟು ಸಂಖ್ಯೆಯಲ್ಲಿ ಪುರುಷ ಹಾಗೂ ಮಹಿಳಾ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
• ಉಡುಪಿ ಜಿಲ್ಲಾ “ಅಕ್ಕಪಡೆ” ತಂಡವನ್ನು ನಗರ ವ್ಯಾಪ್ತಿಯೊಳಗೆ ನಿಯೋಜಿಸಲಾಗುವುದು.
• ಮಹಿಳೆಯರು ಹಾಗೂ ಮಕ್ಕಳ ಸುರಕ್ಷತೆಯ ಕುರಿತು ವಿಶೇಷ ಗಮನ ಹರಿಸಿ, ವಿದೇಶಿ ನಾಗರಿಕರ ಸುರಕ್ಷತೆಗಾಗಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು.
• “Celebrate Responsibly” (ಜವಾಬ್ದಾರಿಯಿಂದ ಆಚರಿಸಿ) ಎಂಬ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಹಾಗೂ ಉತ್ತೇಜನ ನೀಡಲಾಗಿದೆ.
• ದೊಡ್ಡ ಸಾರ್ವಜನಿಕ ಸಮಾವೇಶಗಳ ಮೇಲ್ವಿಚಾರಣೆಗಾಗಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸರು ವಿಶೇಷ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ.
• ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಯವರನ್ನು ನಿಯೋಜಿಸಲಾಗಿದೆ. 3 ಡ್ರೋನ್ ಕ್ಯಾಮೆರಾ, 10 ಹೆಚ್ಚುವರಿ ಪೆಟ್ರೋಲಿಂಗ್ ವಾಹನಗಳು ಹಾಗೂ 24 Public Address Systemನ್ನು ಬಳಸಿಕೊಳ್ಳಲಾಗಿದೆ.
• ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಒಟ್ಟು 13 ಡಿಎಆರ್ ತುಕಡಿ ಹಾಗೂ 2 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ.
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now