ಗೋವಾದಿಂದ ಗಾಂಜಾ ಸಾಗಾಟಕ್ಕೆ ಯತ್ನ; ಕಾರವಾರದಲ್ಲಿ ಇಬ್ಬರ ಬಂಧನ

ಗೋವಾದಿಂದ ಗಾಂಜಾ ಸಾಗಾಟಕ್ಕೆ ಯತ್ನ; ಕಾರವಾರದಲ್ಲಿ ಇಬ್ಬರ ಬಂಧನ
0Shares

ಕಾರವಾರ: ಗೋವಾದಿಂದ ಅಕ್ರಮವಾಗಿ ಗಾಂಜಾ ತಂದು ಕಾರವಾರದಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಕಾರವಾರ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದು, ಅವರಿಂದ ಗಾಂಜಾ, ಬೈಕ್ ಹಾಗೂ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಕಾರವಾರ ತಾಲೂಕಿನ ಬಿಣಗಾ ಗ್ರಾಮದ ರಾಮನಗರದ ಬಳಿ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ 465 ಗ್ರಾಂ ತೂಕದ ಗಾಂಜಾ (ಅಂದಾಜು ಮೌಲ್ಯ ₹25,000), ಬಜಾಜ್ ಪಲ್ಸರ್ ಮೋಟಾರ್‌ಸೈಕಲ್ (ಅಂದಾಜು ಮೌಲ್ಯ ₹75,000) ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತರನ್ನು ಕಾರವಾರದ ಸದಾಶಿವಗಡದ ನಾಗರಾಜ (26) ಹಾಗೂ ವಿನೋದ್ ಕುಮಾರ್ (26) ಎಂದು ಗುರುತಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ ಆರೋಪಿಗಳು ಗೋವಾದಿಂದ ಅಕ್ರಮವಾಗಿ ಗಾಂಜಾವನ್ನು ತಂದು ಕಾರವಾರ ಭಾಗದಲ್ಲಿ ಸ್ಥಳೀಯರಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಸಂಬಂಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಂದ ಗಾಂಜಾ ಖರೀದಿ ಮತ್ತು ಮಾರಾಟ ಜಾಲದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now