ಕಾರ್ಕಳ: ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಪ್ರಥಮ

ಕಾರ್ಕಳ: ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪೂರ್ಣಿಮಾ ಪ್ರಭು ಪ್ರಥಮ

0Shares

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಜನತಾ ಪ.ಪೂ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ಕಾರ್ಕಳದ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪೂರ್ಣಿಮ ಪ್ರಭು ಪ್ರಥಮ
ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಇದೇ ಪಂದ್ಯಾಟದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ದಿಶಾ ಡಿಮೆಲ್ಲೊ ದ್ವಿತೀಯ, ಡೇನಿಕಾ ಕುಂದರ್ ತೃತೀಯ, ದ್ವಿತೀಯ ವಾಣಿಜ್ಯ ವಿಭಾಗದ ಅಪೂರ್ವ ತೃತೀಯ, ಪ್ರಥಮ ವಾಣಿಜ್ಯ ವಿಭಾಗದ ಸಾಚಿ ಶೆಟ್ಟಿ ತೃತೀಯ ಸ್ಥಾನ ಪಡೆದಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now