ಯುವಕ ಮಂಡಲ ಸಾಣೂರು : ಗೌರವ ಅಭಿನಂದನ ಕಾರ್ಯಕ್ರಮ

ಯುವಕ ಮಂಡಲ ಸಾಣೂರು : ಗೌರವ ಅಭಿನಂದನ ಕಾರ್ಯಕ್ರಮ
0Shares

ಕಾರ್ಕಳ : ರಾಜ್ಯ ಅತ್ಯುತ್ತಮ ಯುವ ಮಂಡಲ ಪ್ರಶಸ್ತಿ ಪುರಸ್ಕೃತ ಯುವಕ ಮಂಡಲ (ರಿ.) ಸಾಣೂರು ಇದರ ವತಿಯಿಂದ 2025-26ನೇ ಸಾಲಿನ ದ್ವೀತಿಯ ಪಿ.ಯು.ಸಿ ಅಂತಿಮ ಪರೀಕ್ಷೆಯಲ್ಲಿ ಮತ್ತು ಎಸ್. ಎಸ್. ಎಲ್. ಸಿ (CBSE ಸೇರಿ) ಅಂತಿಮ ಪರೀಕ್ಷೆಯಲ್ಲಿ 90% ಕ್ಕಿಂತ ಅಧಿಕ ಅಂಕ ಪಡೆದ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಸಾಣೂರು ಮತ್ತು ಇಲ್ಲಿಯ ಹೈಸ್ಕೂಲ್ ವಿಭಾಗದ ವಿದ್ಯಾರ್ಥಿಗಳಿಗೆ ದಿನಾಂಕ 14/06/2026 ನೇ ರವಿವಾರ ಬೆಳಿಗ್ಗೆ 10.30 ಕ್ಕೆ ಸಾಣೂರು ರಿಜೆನ್ಸಿ ಹಾಲ್ ನ ಸಭಾಂಗಣದಲ್ಲಿ ಅತಿಥಿ ಗಣ್ಯರ ಉಪಸ್ಥಿತಿಯಲ್ಲಿ ಗೌರವ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಕಳ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವಿ. ಸುನೀಲ್ ಕುಮಾರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಯುವಕ ಮಂಡಲದ ಪ್ರಕಟಣೆ ತಿಳಿಸಿದೆ.

ನಮ್ಮ ವರದಿಗಾರರು

ಸ್ಟೀವನ್ ಕುಲಾಸೊ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now