ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಚಿವ ಯು.ಟಿ. ಖಾದರ್ ಗರಂ

ಕಾರಿನ ಮೇಲೆ ಮರ ಬಿದ್ದು ಚಾಲಕ ಸಾವು: ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಸಚಿವ ಯು.ಟಿ. ಖಾದರ್ ಗರಂ
0Shares

ಕಾರ್ಕಳ ಆಗಸ್ಟ್ 8: “ಎಚ್ಚರಿಕೆ ನೀಡಿದ್ದರೂ ಅಪಾಯಕಾರಿ ಮರ ತೆರವುಗೊಳಿಸದೆ ನಿರ್ಲಕ್ಷ್ಯ ವಹಿಸಿದ್ದಕ್ಕೆ ಹೆಬ್ರಿಯ ಮೂರು ರಸ್ತೆ ಹತ್ತುರ್ಕೆ ಬಳಿ ಕಾರಿನ ಮೇಲೆ ಮರ ಬಿದ್ದು ಪ್ರಗತಿಪರ ಕೃಷಿಕ ದಾರುಣವಾಗಿ ಮೃತಪಟ್ಟಿದ್ದಾರೆ. ಈ ಸಾವಿಗೆ ನೇರವಾಗಿ ಅರಣ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ!” ಎಂದು ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಕಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶನಿವಾರ ನಡೆದ ಪ್ರಕೃತಿ ವಿಕೋಪ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಭೆಗೂ ಮುನ್ನ ಸಚಿವರು ರೆಂಜಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಹೇಡೈಯಲ್ಲಿ ಭೂಕುಸಿತ ಸಂಭವಿಸಬಹುದಾದ ಪ್ರದೇಶಕ್ಕೆ ಭೇಟಿ ನೀಡಿ ಸಂಕಷ್ಟದಲ್ಲಿರುವ ಎರಡು ಕುಟುಂಬಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುವ ಭರವಸೆ ನೀಡಿದರು.

ನಿನ್ನೆ ಹೆಬ್ರಿಯಲ್ಲಿ ಮರ ಬಿದ್ದು ಕೃಷಿಕ ಮೃತರಾಗಿದ್ದಾರೆ, ಅದಕ್ಕೆ ಮುಂಚೆ ಬೆಳಂಜೆಯಲ್ಲೂ ಇದೇ ರೀತಿ ನಡೆದಿತ್ತು.

ಇಲಾಖೆಗಳಿಗೆ ಈ ಬಗ್ಗೆ ಮೊದಲೇ ಎಚ್ಚರಿಕೆ ನೀಡಿದ್ದರೂ ಮರ ತೆರವು ಮಾಡಲಿಲ್ಲ. ಅಡಚಣೆ ತರುವ ಕೊಂಬೆಗಳನ್ನು ಕಡಿಯಲು ಮೀನಮೇಷ ಎಣಿಸುವುದೇಕೆ? ನಿಮ್ಮ ನಿರ್ಲಕ್ಷ್ಯಕ್ಕೆ ಈಗ ಆ ಮೃತರ ಕುಟುಂಬಕ್ಕೆ ಏನು ಉತ್ತರ ನೀಡುತ್ತೀರಿ?” ಎಂದು ಅರಣ್ಯ ಲೋಕೋಪಯೋಗಿ ಮತ್ತು ಮೆಸ್ಕಾಂ ಇಲಾಖಾ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now