
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಿರ್ಗಾನದ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಇವರ ವತಿಯಿಂದ ಆಯೋಜಿಸಲಾಗಿದ್ದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.
ವಿದ್ಯಾ ಸಂಸ್ಥೆಯ ಪ್ರೌಢಶಾಲಾ ವಿಭಾಗದ 8ನೇ ತರಗತಿಯ ಅಕ್ಷಯ್ ಪ್ರಭು ಹಾಗೂ 9ನೇ ತರಗತಿಯ ಸುದೀಕ್ಷಾ ಅವರು ತಮ್ಮ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ.
ಈ ಅದ್ಭುತ ಸಾಧನೆಯ ಮೂಲಕ ಇಬ್ಬರೂ ವಿದ್ಯಾರ್ಥಿಗಳು ರಾಮನಗರದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕ್ರೈಸ್ಟ್ ಕಿಂಗ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ ಹಾಗೂ ಪೋಷಕರು ಹರ್ಷ ವ್ಯಕ್ತಪಡಿಸಿದ್ದು, ರಾಜ್ಯ ಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಸಂಸ್ಥೆಗೆ ಕೀರ್ತಿ ತರಲಿ ಎಂದು ಹಾರೈಸಿದ್ದಾರೆ.
ಅಕ್ಷಯ್ ಪ್ರಭು ಮತ್ತು ಸುದೀಕ್ಷಾ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಹಾಗೂ ರಾಜ್ಯ ಮಟ್ಟದ ಸ್ಪರ್ಧೆಗೆ ಶುಭಾಶಯಗಳು!
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now