
ಕಾರವಾರ: ಕಾರವಾರದಿಂದ ಸದಾಶಿವಗಡದತ್ತ ತೆರಳುತ್ತಿದ್ದ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಉಜ್ವಲ್ ಹಾಲ್ ಎದುರಿನ ಡಿವೈಡರ್ಗೆ ಡಿಕ್ಕಿ ಹೊಡೆದ ಪರಿಣಾಮ ಡಿವೈಡರ್ ಮುರಿದು ಕಾರು ಸಂಪೂರ್ಣ ಜಖಂಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ.
ಅಪಘಾತಕ್ಕೀಡಾದ ಕಾರು ಮಹಾರಾಷ್ಟ್ರ ನೋಂದಣಿಯದ್ದಾಗಿದ್ದು, ಸದಾಶಿವಗಡ ನಿವಾಸಿಗೆ ಸೇರಿದೆ ಎಂದು ತಿಳಿದುಬಂದಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು.
ಡಿಕ್ಕಿಯ ತೀವ್ರತೆಗೆ ಕಾರಿನ ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದ ಮೂವರೂ ಯಾವುದೇ ಜೀವಹಾನಿಯಾಗದೆ ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now