
ಕಾರವಾರ: ಕಾರವಾರ ಅಂಚೆ ವಿಭಾಗ ಹಾಗೂ ನೌ-ಸೇನಾ ನಾಗರಿಕರ ವಸತಿ ಸಮುಚ್ಚಯದ ವತಿಯಿಂದ ಆ.8ರಂದು ಅಮದಳ್ಳಿ ಸಿ.ಎಚ್.ಸಿ. ಕಮ್ಯೂನಿಟಿ ಹಾಲ್‌ನಲ್ಲಿ ಆಧಾರ್ ನವೀಕರಣ ಹಾಗೂ ಜನ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಅಭಿಯಾನದಡಿ ಹೊಸ ಆಧಾರ್ ನೋಂದಣಿ, ಬಯೋಮೆಟ್ರಿಕ್ ಪರಿಷ್ಕರಣೆ, ವಿಳಾಸ ಹಾಗೂ ಮೊಬೈಲ್ ಸಂಖ್ಯೆ ತಿದ್ದುಪಡಿ ಸೇರಿದಂತೆ ವಿವಿಧ ಆಧಾರ್ ಸೇವೆಗಳನ್ನು ಒದಗಿಸಲಾಗುತ್ತಿದೆ.
ಅಂಚೆ ಇಲಾಖೆಯ ವಿವಿಧ ಉಳಿತಾಯ ಯೋಜನೆಗಳು, ಅಂಚೆ ಜೀವ ವಿಮೆ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇರಿದಂತೆ ಹಲವು ಸೇವೆಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ, ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ, ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಸೇರಿದಂತೆ ವಿವಿಧ ವಿಮಾ ಯೋಜನೆಗಳ ಸೌಲಭ್ಯ ಪಡೆಯಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಅಲ್ಲದೇ, ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್‌ಫರ್ (DBT) ಫಲಾನುಭವಿಗಳಿಗಾಗಿ ಸ್ಥಳದಲ್ಲಿಯೇ ಖಾತೆ ತೆರೆಯುವ ವ್ಯವಸ್ಥೆಯನ್ನೂ ಮಾಡಲಾಗಿದೆ.
ಸಾರ್ವಜನಿಕರು ಅಭಿಯಾನದ ಸದುಪಯೋಗ ಪಡೆದುಕೊಳ್ಳುವಂತೆ ಅಂಚೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮದಲ್ಲಿ ಕಾರವಾರ ಅಂಚೆ ಜೀವ ವಿಮೆ ಅಭಿವೃದ್ಧಿ ಅಧಿಕಾರಿ ರಾಮದಾಸ ಪಟಗಾರ, ಉಪ ವಿಭಾಗ ಅಂಚೆ ಮೇಲ್ವಿಚಾರಕರಾದ ಕಿರಣ್ ಕುಮಾರ್, ಅಮರ್ ನಾಗೇಕರ್, ಅಜಿತ್ ನಾಯ್ಕ್, ಅಮಿತ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now