
ಕೇರಳದಿಂದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ಕಾಸರಗೋಡು, ಸೆ.11: ಕೇರಳದಿಂದ ಯುಪಿಎಸ್ಸಿ ಸಿವಿಲ್ ಸರ್ವಿಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬುಡಕಟ್ಟು ಸಮುದಾಯದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಐಎಎಸ್ ಅಧಿಕಾರಿ ಶ್ರೀಧನ್ಯಾ ಸುರೇಶ್ ಅವರು ಕಾಸರಗೋಡು ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.
ವಯನಾಡ್ ಜಿಲ್ಲೆಯ ಪೊಝುತಾನಾ ಸಮೀಪದ ಅಂಬಲಕ್ಕೊಲ್ಲಿ ಗ್ರಾಮದವರಾದ ಶ್ರೀಧನ್ಯಾ ಅವರು ಕುರಿಚಿಯಾ ಬುಡಕಟ್ಟು ಸಮುದಾಯಕ್ಕೆ ಸೇರಿದವರು. ಅವರ ತಂದೆ ಸುರೇಶ್ ಹಾಗೂ ತಾಯಿ ಕಮಲಾ ದಿನಗೂಲಿ ಕಾರ್ಮಿಕರಾಗಿದ್ದು, ಆರ್ಥಿಕ ಸಂಕಷ್ಟದ ನಡುವೆಯೂ ಮಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದರು.
2019ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿರುವ ಶ್ರೀಧನ್ಯಾ ಸುರೇಶ್ ಅವರು ಕೋಝಿಕೋಡ್ ಸಹಾಯಕ ಜಿಲ್ಲಾಧಿಕಾರಿಯಾಗಿ ಆಡಳಿತ ಸೇವೆ ಆರಂಭಿಸಿದ್ದರು. ಬಳಿಕ ಮಲಪ್ಪುರಂ ಜಿಲ್ಲಾ ಅಭಿವೃದ್ಧಿ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಇದರೊಂದಿಗೆ ಪ್ರವಾಸೋದ್ಯಮ ಇಲಾಖೆಯಲ್ಲಿ ಹೆಚ್ಚುವರಿ ನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿರುವ ಅವರು, ಆಹಾರ ಮತ್ತು ಸುರಕ್ಷತಾ ಅಧಿಕಾರಿಯಾಗಿಯೂ ಜವಾಬ್ದಾರಿ ನಿರ್ವಹಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now