
ಕಿನ್ನಿಗೋಳಿ : ರೋಟರಿ ಆಂಗ್ಲ ಮಾಧ್ಯಮ ಶಾಲೆ, ಕಿನ್ನಿಗೋಳಿಯಲ್ಲಿ 2026-27ನೇ ಸಾಲಿನ ಶಿಕ್ಷಕ-ರಕ್ಷಕ ಸಂಘದ ಸಭೆಯು ಶನಿವಾರ(ಆ.08) ನಡೆಯಿತು. ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಬೆಲ್ಮಣ್ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕಿ ಜಯಂತಿ ಶೆಟ್ಟಿ ಮಾತನಾಡಿ, ಇಂದಿನ ಮಕ್ಕಳು ಮೊಬೈಲ್, ಸಾಮಾಜಿಕ ಜಾಲತಾಣಗಳು ಹಾಗೂ ಕೃತಕ ಬುದ್ದಿಮತ್ತೆಯ ಪ್ರಭಾವದ ನಡುವೆ ಬೆಳೆಯುತ್ತಿರುವುದರಿಂದ, ಅವರಿಗೆ ಪೋಷಕರು ಮತ್ತು ಶಿಕ್ಷಕರು ಸರಿಯಾದ ಮಾರ್ಗದರ್ಶನ ನೀಡುವುದು ಅಗತ್ಯ ಎಂದು ತಿಳಿಸಿದರು. ಪೋಷಕರು ಮತ್ತು ಶಿಕ್ಷಕರು ಪರಸ್ಪರ ದೂರುಗಳನ್ನು ನೀಡುವುದಕ್ಕಿಂತ, ಮಕ್ಕಳ ಒಳಿತಿಗಾಗಿ ಸಹಕಾರದಿಂದ ಕಾರ್ಯನಿರ್ವಹಿಸಬೇಕು.
ಮಕ್ಕಳಲ್ಲಿ ಏಕಾಗ್ರತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ಉತ್ತಮ ಮೌಲ್ಯಗಳನ್ನು ಬೆಳೆಸುವ ಮೌಲ್ಯಾಧಾರಿತ ಶಿಕ್ಷಣ ನೀಡುವ ಅಗತ್ಯವನ್ನು ಎಂದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now