
ರಾಷ್ಟ್ರೀಯ ಹೆದ್ದಾರಿ 66ರ ಕಿನ್ನಿಮುಲ್ಕಿಯಲ್ಲಿ ದಾಳಿಂಬೆ ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ಶನಿವಾರ ನಡೆದಿದೆ. ಮಹಾರಾಷ್ಟ್ರದ ಸಂಗೋಲದಿಂದ ಕೇರಳದ ಕೊಚ್ಚಿಕುಡಿಗೆ ಸುಮಾರು ಎರಡೂವರೆ ಟನ್ ದಾಳಿಂಬೆ ಸಾಗಿಸುತ್ತಿದ್ದ ಪಿಕಪ್ ವಾಹನ ಕಿನ್ನಿಮುಲ್ಕಿ ಬಳಿ ಪಲ್ಟಿಯಾಗಿದೆ. ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ದಾಳಿಂಬೆ ಹಣ್ಣುಗಳು ರಸ್ತೆಯಲ್ಲೆಲ್ಲಾ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಕೆಲಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು.
ಅಪಘಾತದಲ್ಲಿ ಪಿಕಪ್ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಪೊಲೀಸರು ಹಾಗೂ ಸಂಬಂಧಪಟ್ಟ ಸಿಬ್ಬಂದಿ ತೆರಳಿ ರಸ್ತೆಯಲ್ಲಿ ಬಿದ್ದಿದ್ದ ದಾಳಿಂಬೆ ಹಣ್ಣುಗಳನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now