
ಕಿರಿಮಂಜೇಶ್ವರ : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರತ್ತು ಬಾಯಿ ಪ್ರೌಢಶಾಲೆ ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿದ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮಿಡಿಯಂ ಶಾಲೆಯ ದಾಖಲೆಯ 3 ವಿದ್ಯಾರ್ಥಿಗಳು ಬೈಂದೂರು ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿ ಚಿನ್ನದ ಪದಕದೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ* ಶಿವಾನಿ (10ನೇ ತರಗತಿ) ಹಾಗೂ 14ರ ವಯೋಮಾನದ ಹುಡುಗರ ವಿಭಾಗದಲ್ಲಿ ತ್ರಿನೀತ್ (8ನೇ ತರಗತಿ) ಹಾಗೂ ಪ್ರಚೇತ್ (7ನೇ ತರಗತಿ) ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕಾಗಿ ಪ್ರತಿ ಶನಿವಾರದಂದು ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೂ ವಿವಿಧ ಹವ್ಯಾಸಿ ತರಬೇತಿಗಳನ್ನು ನಡೆಸುವುದರೊಂದಿಗೆ ವಿಶೇಷ ಪ್ರತಿಭಾವಂತರಿಗೆ ಪ್ರತಿನಿತ್ಯವೂ ಶಾಲಾ ಸಮಯದಲ್ಲಿ ಸಂಸ್ಥೆಯ ದೈಹಿಕಶಿಕ್ಷಣ ಶಿಕ್ಷಕರು ಮತ್ತು ಪರಿಣಿತ ತರಬೇತುದಾರದಿಂದ ವಿಶೇಷ ತರಬೇತಿಯನ್ನು ಒದಗಿಸಲಾಗುತ್ತಿದೆ.
ವಿಜೇತ ವಿದ್ಯಾರ್ಥಿಗಳಿಗೆ ಜನತಾ ಸಮೂಹ ಸಂಸ್ಥೆಗಳ ಅಧ್ಯಕ್ಷರು, ಕಾರ್ಯದರ್ಶಿ, ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಕರು,ಬೋಧಕ/ಬೋಧಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now