
ಕ್ರೈಸ್ತ ಸಮುದಾಯದ ಪವಿತ್ರ ದಿನವಾದ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ಇಂದು ಉಪವಾಸ, ಧ್ಯಾನ ಹಾಗೂ ಪ್ರಾರ್ಥನೆಯೊಂದಿಗೆ ಆಚರಿಸಲಾಯಿತು.
ದೇವಾಲಯದಲ್ಲಿ ಬೆಳಗ್ಗಿನಿಂದ ಪ್ರಾರ್ಥನೆ, ಧ್ಯಾನ, ಯೇಸುವಿನ ಶಿಲುಬೆಯ ಹಾದಿಯ ವಾಚನ ಜರುಗಿತು.
ದೇವಾಲಯದ ಪ್ರಾರ್ಥನಾ ವಿಧಿಯನ್ನು ವಂದನಿಯ ಧರ್ಮಗುರುಗಳಾದ ಸ್ಟೀಫನ್ ಡಿ’ಸೋಜಾ (ಉಡುಪಿ ಧರ್ಮಪ್ರಾಂತ್ಯದ ಕುಲಪತಿಗಳು) ಚರ್ಚಿನ ಧರ್ಮಗುರುಗಳಾದ ವಂದನಿಯ ಜೋಸೆಫ್ ಮಾಚಾದೋ, ಬ್ರದರ್ ಡೇರಿಕ್ ಮಸ್ಕರೇನ್ಹಸ್ ಅವರು ನೆರವೇರಿಸಿದರು.
ದೇವಾಲಯದಲ್ಲಿ ಯೇಸುಕ್ರಿಸ್ತರ ಬಂಧನ, ಶಿಲುಬೆಯ ಮೇಲೆ ಮರಣವನ್ನಪ್ಪುವ ತನಕದ ಘಟನೆ ಗಳನ್ನು ಪ್ರಸ್ತುತಪಡಿಸಲಾಯಿತು.
ಚರ್ಚಿನಲ್ಲಿ ಧರ್ಮಗುರುಗಳು ರಕ್ತವರ್ಣದ ಪೂಜಾ ಬಟ್ಟೆಯನ್ನು ಧರಿಸಿ ಯೇಸುಕ್ರಿಸ್ತನ ಕೊನೆಯ ಗಳಿಗೆಗಳ ವೃತ್ತಾಂತ ಓದಿದರು. ಬಳಿಕ ಶಿಲುಬೆಯನ್ನು ಮೆರವಣಿಗೆಯಲ್ಲಿ ತಂದು ಭಕ್ತರು ಮುತ್ತಿಟ್ಟು ತಮ್ಮ 40 ದಿನಗಳ ತ್ಯಾಗದ ಉಳಿಕೆಯ ಹಣವನ್ನು ಬಡಬಗ್ಗರಿಗಾಗಿ ನೀಡಿದರು..







Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now