ಕೊಲ್ಲೂರು ದೇವಸ್ಥಾನದ ನಕಲಿ ವೆಬ್ ಸೈಟ್ ರಚಿಸಿ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ವಂಚನೆ

ಕೊಲ್ಲೂರು ದೇವಸ್ಥಾನದ ನಕಲಿ ವೆಬ್ ಸೈಟ್ ರಚಿಸಿ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ವಂಚನೆ

0Shares

ಕೊಲ್ಲೂರು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 80/2025 ಕಲಂ:318(2), 318(4) BNS ಮತ್ತು ಕಲಂ:66(C), 66(D) IT Act
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ ಸೈಟ್ ಅನ್ನು ಹೊಲುವ ನಕಲಿ ವೆಬ್ ಸೈಟ್ ಸೃಜಿಸಿ ದೇವಸ್ಥಾನದ ಭಕ್ತಾಧಿಗಳಿಂದ ಮುಂಗಡವಾಗಿ ರೂಮ್ ಬುಕಿಂಗ್ ಮಾಡಿಸುವ ಬಗ್ಗೆ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚನೆ ಮಾಡುತ್ತಿರುವ ಬಗ್ಗೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಕಾರ್ಯಾನಿರ್ವಹಣಾಧಿಕಾರಿಯವರು ಕೊಲ್ಲೂರು ಪೊಲೀಸ್ ಠಾಣೆಗೆ ನೀಡಿದ ದೂರಿನಂತೆ ದಿನಾಂಕ:03/11/2025 ರಂದು ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಕೊಲ್ಲೂರು ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 80/2025 ಕಲಂ:318(2), 318(4) BNS ಮತ್ತು ಕಲಂ:66(C), 66(D) IT Act ರಂತೆ ಪ್ರಕರಣ ದಾಖಲಾಗಿರುತ್ತದೆ.

ಈ ಪ್ರಕರಣವು ಮುಂಜುರಾಯಿ ಇಲಾಖೆಗೆ ಒಳಪಟ್ಟ ದೇವಸ್ಥಾನಕ್ಕೆ ಸಂಬಂಧಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದಾಖಲಾದ ಪ್ರಕರಣವಾಗಿರುವುದರಿಂದ ಪ್ರಕರಣದಲ್ಲಿ ಆರೋಪಿ ಪತ್ತೆಯ ಬಗ್ಗೆ ಕುಂದಾಪುರ ಉಪವಿಭಾಗದ ಮಾನ್ಯ ಪೊಲೀಸ್ ಉಪಾಧೀಕ್ಷಕರಾದ ಹೆಚ್.ಡಿ ಕುಲಕರ್ಣಿ ರವರ ಮಾರ್ಗದರ್ಶನದಲ್ಲಿ ತನಿಖಾಧಿಕಾರಿಯವರಾದ ಬೈಂದೂರು ವೃತ್ತದ ಪೊಲೀಸ್ ವೃತ್ತ ನಿರೀಕ್ಷಕರಾದ ಶಿವಕುಮಾರ.ಬಿ ಮತ್ತು ಸಂತೋಷ ಎ ಕಾಯ್ಕಿಣಿ ಸಿಪಿಐ ಕುಂದಾಪುರ ಗ್ರಾಮಾಂತರ ವೃತ್ತ ರವರ ನೇತೃತ್ವದ ಕೊಲ್ಲೂರು ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ವಿನಯ ಎಂ ಕೋರ್ಲಹಳ್ಳಿ ಮತ್ತು ಭೀಮ ಶಂಕರ ಸಿನ್ನೂರ ಹಾಗೂ ಸಿಬ್ಬಂದಿಯವರಾದ ಕೊಲ್ಲೂರು ಠಾಣೆಯ ನಾಗೇಂದ್ರ , ಗಂಗೊಳ್ಳಿ ಪೊಲೀಸ್ ಠಾಣೆಯ ರಾಘವೇಂದ್ರ ಶೆಟ್ಟಿ, ಕೃಷ್ಣ ದೇವಾಡಿಗ ರವರ ನೇತೃತ್ವದ ತಂಡವನ್ನು ರಚಿಸಿರುತ್ತಾರೆ.

ರಾಜಸ್ಥಾನ ರಾಜ್ಯದ ತಿಜಾರಿ ಜಿಲ್ಲೆಯಲ್ಲಿನ ಆರೋಪಿ ನಾಸೀರ್ ಹುಸೇನ್ ಎಂಬವನು ಕೃತ್ಯ ನಡೆಸಿರುವುದನ್ನು ಖಚಿತ ಪಡಿಸಿಕೊಂಡು ದಿನಾಂಕ:19/12/2025 ರಂದು ಅರೋಪಿ ನಾಸೀರ್ ಹುಸೇನ್, ಪ್ರಾಯ:21 ವರ್ಷ, ತಂದೆ: ಖುರ್ಶೀದ್ ಖಾನ್, ವಾಸ: ದಾಖಾಪುರಿ, ಸರ್ಹೆತಾ ಅಂಚೆ, ತಿಜಾರಾ ಆಲ್ವಾರ್, ರಾಜಸ್ಥಾನ ರಾಜ್ಯ ಈತನನ್ನು ದಸ್ತಗಿರಿ ಮಾಡಿರುತ್ತಾರೆ, ಆರೋಪಿಯಿಂದ ಕೃತ್ಯಕ್ಕೆ ಬಳಸಿದ Laptop ಸ್ವಾಧೀನಪಡಿಸಿಕೊಂಡು ದಿನಾಂಕ:20/12/2025 ರಂದು ಆರೋಪಿಯನ್ನು ಮಾನ್ಯ ಬೈಂದೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.

ನಮ್ಮ ವರದಿಗಾರರು

ವಿಲ್ಸನ್ ಡಿಸೋಜ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now