
ಕೋಟ: ಗದಗದಲ್ಲಿ ನಡೆದ ರಾಜ್ಯಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಕೋಟ ವಿವೇಕ ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ಸೃಷ್ಟಿ ಆರ್. ಪ್ರಥಮ ಸ್ಥಾನ ಗಳಿಸುವ ಮೂಲಕ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು
ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನ ಪಡೆದುಕೊಂಡಿರುವ ಸೃಷ್ಟಿ ಆರ್. ಅವರು ಶಾಲೆಗೆ ಕೀರ್ತಿ ತಂದಿದ್ದಾರೆ. ಅವರ ಈ ಸಾಧನೆಯು ಶಾಲೆಯ ಕ್ರೀಡಾ ಕ್ಷೇತ್ರದ ಹೆಗ್ಗಳಿಕೆಯನ್ನು ಹೆಚ್ಚಿಸಿದ್ದು, ರಾಷ್ಟ್ರಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆ ಮೂಡಿಸಿದೆ.
ವಿದ್ಯಾರ್ಥಿನಿ ಸೃಷ್ಟಿ ಆರ್., ತರಬೇತುದಾರರಾದ ದೈಹಿಕ ಶಿಕ್ಷಣ ಶಿಕ್ಷಕಿ ಮಮತಾ ಹಾಗೂ ಕೋಟ ವಿವೇಕ ಶಾಲಾ ಮುಖ್ಯೋಪಾಧ್ಯಾಯ ಪ್ರೇಮಾನಂದ ಅವರು ಮಾರ್ಗದರ್ಶನ ನೀಡಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now