ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಸಿ.ವಿ.ಎಸ್.ಕೆ ಪ್ರೌಢಶಾಲೆಯ ತಂಡ ಚಾಂಪಿಯನ್

ಜಿಲ್ಲಾಮಟ್ಟದ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಸಿ.ವಿ.ಎಸ್.ಕೆ ಪ್ರೌಢಶಾಲೆಯ ತಂಡ ಚಾಂಪಿಯನ್
0Shares

▶ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಮಟಾ :ಭಟ್ಕಳ ತಾಲೂಕಿನ ಮುರುಡೇಶ್ವರದ ಬೀನಾ ವೈದ್ಯ ಕಾಲೇಜಿನಲ್ಲಿ ದಿನಾಂಕ ಸಪ್ಟೆಂಬರ್ 20 ರಂದು ನಡೆದ ಜಿಲ್ಲಾಮಟ್ಟದ ಟೇಬಲ್ ಟೆನ್ನಿಸ್ ಕ್ರೀಡಾಕೂಟದಲ್ಲಿ ಸಿ.ವಿ.ಎಸ್.ಕೆ ಪ್ರೌಢಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮೆರೆದಿದ್ದಾರೆ.
ತನ್ವಿ ಹೆಗಡೆ, ಸಾನ್ವಿ ಹೆಗಡೆ, ಸಾನ್ವಿಕ ಶೇಟ್, ರಕ್ಷಾ ನಾಯ್ಕ್ ಹಾಗೂ ಧರಣಿ ಗಟ್ಟಿಮನಿ ಅವರನ್ನು ಒಳಗೊಂಡ ನಮ್ಮ ಪ್ರೌಢಶಾಲೆಯ ಬಾಲಕಿಯರ ತಂಡವು ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು, ರಾಜ್ಯಮಟ್ಟದ ಸ್ಪರ್ಧೆಗೆ ಅರ್ಹತೆ ಪಡೆದುಕೊಂಡಿದೆ.

ಇದೇ ಸಂದರ್ಭದಲ್ಲಿ ಶಾಲೆಯ ಬಾಲಕರ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ. ತಂಡದ ಅನ್ಮೋಲ್ ನಾಯ್ಕ್ ಹಾಗೂ ಪ್ರೇಮ್ ಶೇಟ್ ಅವರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ರಾಜ್ಯಮಟ್ಟದ ಟೇಬಲ್ ಟೆನಿಸ್ ಕ್ರೀಡಾಕೂಟವು ಅಕ್ಟೋಬರ್ 1ರಿಂದ 4ರವರೆಗೆ ಬೆಂಗಳೂರು ಉತ್ತರದಲ್ಲಿ ನಡೆಯಲಿದೆ.

ವಿದ್ಯಾರ್ಥಿಗಳ ಈ ಸಾಧನೆಗೆ ಮಾರ್ಗದರ್ಶಿಸಿದ ದೈಹಿಕ ಶಿಕ್ಷಣ ಶಿಕ್ಷಕರಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿ, ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡುವಂತೆ ಶುಭ ಹಾರೈಸಿದ್ದಾರೆ

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now