
ಕುಮಟಾ :ಇಲ್ಲಿನ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಸಿ.ವಿ.ಎಸ್.ಕೆ ಪ್ರೌಢಶಾಲೆಯಲ್ಲಿ ಇಂದು ವನಮಹೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಆರ್.ಎಚ್.
ದೇಶಭಂಡಾರಿ ಆಗಮಿಸಿದ್ದರು. ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುಮಾ ಪ್ರಭು, ಸರ್ವ ಶಿಕ್ಷಕ ವೃಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮುಖ್ಯ ಅತಿಥಿಗಳಾದ ಆರ್.ಎಚ್. ದೇಶಭಂಡಾರಿ ಅವರು ಮಾತನಾಡಿ “ಮರಗಳ ಮಹತ್ವ, ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರದ ಕುರಿತು ಪ್ರೇರಣಾದಾಯಕವಾದ ಮಾತನ್ನಾಡಿದರು. ಪ್ರತಿಯೊಬ್ಬರೂ ವರ್ಷಕ್ಕೆ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ಕರೆ ನೀಡಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಪರಿಸರ ಜಾಗೃತಿ ಮೂಡಿಸುವ ನೃತ್ಯ ರೂಪಕವನ್ನು ಪ್ರದರ್ಶಿಸಿ ಎಲ್ಲರ ಗಮನ ಸೆಳೆದರು.
ನಂತರ ಶಾಲಾ ಕೈತೋಟದಲ್ಲಿ ಸಿಬ್ಬಂದಿ ರಾಮಚಂದ್ರ ಪಟಗಾರ ಸಹಾಯದೊಂದಿಗೆ ವಿವಿಧ ಜಾತಿಯ ಹೂವು, ಹಣ್ಣಿನ ಸಸಿಗಳನ್ನು ನೆಡಲಾಯಿತು. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಅತಿಥಿಗಳು ಉತ್ಸಾಹದಿಂದ ಗಿಡ ನೆಡುವ ಕಾರ್ಯದಲ್ಲಿ ಪಾಲ್ಗೊಂಡರು.
ಕಾರ್ಯಕ್ರಮದ ಕೊನೆಯಲ್ಲಿ ಸಿ.ವಿ.ಎಸ್.ಕೆ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಸುಮಾ ಪ್ರಭು ಅವರು ಎಲ್ಲರಿಗೂ ಧನ್ಯವಾದಗಳನ್ನು ಅರ್ಪಿಸಿ, ನೆಟ್ಟಿರುವ ಗಿಡಗಳನ್ನು ಸಂರಕ್ಷಿಸುವ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ವಹಿಸಿದರು.
ವನಮಹೋತ್ಸವ ಕಾರ್ಯಕ್ರಮವು ಪರಿಸರದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮತ್ತು ಜವಾಬ್ದಾರಿಯ ಮನೋಭಾವವನ್ನು ಬೆಳೆಸುವಲ್ಲಿ ಯಶಸ್ವಿಯಾಯಿತು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now