ಹೆದ್ದಾರಿಯಿಂದ ಹೊಳೆಗೆ ಪಲ್ಟಿಯಾದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು

ಹೆದ್ದಾರಿಯಿಂದ ಹೊಳೆಗೆ ಪಲ್ಟಿಯಾದ ಲಾರಿ; ಚಾಲಕ, ಕ್ಲೀನರ್ ಪ್ರಾಣಾಪಾಯದಿಂದ ಪಾರು
0Shares

ಕುಮಟಾ: ರಾಷ್ಟ್ರೀಯ ಹೆದ್ದಾರಿ 66ರ ಮಾನೀರು ಸಮೀಪ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಪಕ್ಕದ ಹೊಳೆಗೆ ಪಲ್ಟಿಯಾದ ಘಟನೆ ಸೋಮವಾರ ನಡೆದಿದೆ.

ಅಂಕೋಲಾ ಕಡೆಯಿಂದ ಮಂಗಳೂರು ಕಡೆಗೆ ಸಾಗುತ್ತಿದ್ದ ಲಾರಿ, ಮಾನೀರು ಬಳಿ ಬರುತ್ತಿದ್ದ ವೇಳೆ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಳೆಗೆ ಉರುಳಿದೆ. ಅಪಘಾತದ ತೀವ್ರತೆ ಹೆಚ್ಚಿದ್ದರೂ ಲಾರಿಯ ಚಾಲಕ ಹಾಗೂ ಕ್ಲೀನರ್ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿರುವುದು ಸಮಾಧಾನದ ಸಂಗತಿಯಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಕುಮಟಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೊಳೆಗೆ ಬಿದ್ದಿರುವ ಲಾರಿಯನ್ನು ಕ್ರೇನ್ ಸಹಾಯದಿಂದ ಮೇಲಕ್ಕೆ ಎತ್ತುವ ಕಾರ್ಯ ನೆಡೆಯಿತು. ಅಪಘಾತಕ್ಕೆ ನಿಖರ ಕಾರಣ ಏನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now