ಕುಮಟಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ: 11 ಮಂದಿ ಪೊಲೀಸರ ವಶಕ್ಕೆ

ಕುಮಟಾ ವ್ಯಾಪ್ತಿಯಲ್ಲಿ ಗಾಂಜಾ ಸೇವನೆ: 11 ಮಂದಿ ಪೊಲೀಸರ ವಶಕ್ಕೆ
0Shares

ಕುಮಟಾ: ಪಟ್ಟಣ ವ್ಯಾಪ್ತಿಯ ಸಾರ್ವಜನಿಕ ಸ್ಥಳವೊಂದರಲ್ಲಿ ಗಾಂಜಾ ಸೇವನೆ ಮಾಡುತ್ತಿದ್ದ 11 ಮಂದಿಯನ್ನು ಕುಮಟಾ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಂಧಿತರಲ್ಲಿ ಉತ್ತರ ಪ್ರದೇಶದ ಮೂವರು, ಒಡಿಶಾದ ಮೂವರು, ಪಶ್ಚಿಮ ಬಂಗಾಳದ ಇಬ್ಬರು, ಅಂಕೋಲಾದ ಒಬ್ಬ ಹಾಗೂ ವಿಜಯಪುರ ಜಿಲ್ಲೆಯ ಒಬ್ಬ ಸೇರಿದಂತೆ ವಿವಿಧ ಭಾಗಗಳ ನಿವಾಸಿಗಳು ಇದ್ದಾರೆ.

ಕುಮಟಾ ಪೊಲೀಸ್ ಠಾಣೆಯ ಪಿ.ಎಸ್.ಐ. ಖಾದರ್ ಭಾಷಾ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಬಳಿಕ ಕುಮಟಾ ತಾಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿದ ವೇಳೆ ಆರೋಪಿಗಳು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ.

ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now