
ಕುಂದಾಪುರ: ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಯೋಗದೊಂದಿಗೆ ವಿಶ್ವಮಹಿಳಾ ದಿನಾಚರಣೆ ಕಾರ್ಯಕ್ರಮ ಇದೇ ಬರುವ ಮಾ.9ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕೋಟದ ಪಂಚವರ್ಣ ಕಛೇರಿಯಲ್ಲಿ ಈ ಕಾರ್ಯಕ್ರಮ ಹಮ್ಮಿಕೊಂಡಿದೆ.
ಪಂಚವರ್ಣ ಮಹಿಳಾ ಸಾಧಕ ಪುರಸ್ಕಾರಕ್ಕೆ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತೆ ಸಾಸ್ತಾನ ಪಾಂಡೇಶ್ವರದ ಲಿಲಾವತಿ ಗಂಗಾಧರ್ ಆಯ್ಕೆಗೊಳಿಸಿದ್ದು ಗಣ್ಯರ ಸಮ್ಮುಖದಲ್ಲಿ ಈ ಪುರಸ್ಕಾರ ಪ್ರದಾನ ನಡೆಯಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ,ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್,ಸ್ನೇಹಕೂಟದ ಭಾರತಿ ವಿ ಮಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now