
ದಿನಾಂಕ 09/07/2026 ರಂದು ಮಧ್ಯಾಹ್ನ ಸುಮಾರು 01-15 ಗಂಟೆಗೆ, ಕುಂದಾಪುರ ತಾಲೂಕಿನ, ಕೊಟೇಶ್ವರ ಗ್ರಾಮದ ಕಿನಾರಾ ಜಂಕ್ಷನ್ ಬಳಿ NH 66 ರಸ್ತೆಯಲ್ಲಿ, ಆಪಾದಿತ ಬಾಲ ಮುರುಗನ್ ಎಂಬವರು TN 94-Z-3747ನೇ ಲಾರಿಯನ್ನು ಉಡುಪಿ ಕಡೆಯಿಂದ ಬೈಂದೂರು ಕಡೆಗೆ ವೇಗ ಹಾಗೂ ಅಜಾಗರುಕತೆಯಿಂದ ಚಲಾಯಿಸಿಕೊಂಡು ರಸ್ತೆಯ ಬಲಬದಿಯಲ್ಲಿ ಹೋಗುತ್ತಿದ್ದ ವಾಹನವನ್ನು ಎಡಬದಿಯಿಂದ ಓವರ್ ಟೇಕ್ ಮಾಡುತ್ತ, ಅದೇ ದಿಕ್ಕಿನಲ್ಲಿ ರಸ್ತೆಯ ಎಡಬದಿಯಲ್ಲಿ ಭರತ್ ಶೆಟ್ಟಿ ಎಂಬವರು ಸವಾರಿ ಮಾಡಿಕೊಂಡು ಹೋಗುತ್ತಿದ್ದ KA20ET-1646ನೇ ಬೈಕಿಗೆ ಜೋರಾಗಿ ಹಿಂದಿನಿಂದ ಡಿಕ್ಕಿ ಹೊಡೆದಾಗ ಬೈಕ್ ಸಮೇತ ರಸ್ತೆಗೆ ಬಿದ್ದ ಭರತ್ ಶೆಟ್ಟಿಯವರ ಎಡ ಕೈ, ಭುಜ, ಎಡ ಎದೆಗೆ, ಬಲಕೈ ಸೇರಿದಂತೆ ದೇಹದ ಇತರೆ ಅಂಗಾಂಗಗಳಿಗೆ ಗಂಭೀರ ರಕ್ತಗಾಯಗಳಾಗಿ ಕಿವಿ ಹಾಗೂ ಮೂಗಿನಿಂದ ರಕ್ತಸ್ರಾವವಾಗಿ ಪ್ರಜ್ಞೆ ಕಳೆದು ಕೊಂಡವರನ್ನು ಚಿಕಿತ್ಸೆ ಬಗ್ಗೆ ಹತ್ತಿರದ ಎನ್. ಆರ್ ಆಚಾರ್ಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ವೈದ್ಯರು ಪರೀಕ್ಷಿಸಿ ಮಧ್ಯಾಹ್ನ 01-30 ಗಂಟೆಗೆ ಮೃತಪಟ್ಟಿರುವುದಾಗಿ ದೃಡಪಡಿಸಿರುತ್ತಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ : 58/2026 ಕಲಂ 281, 106(1) BNSರಂತೆ ಪ್ರಕರಣ ದಾಖಲಾಗಿರುತ್ತದೆ.
ಸದರಿ ಪ್ರಕರಣದಲ್ಲಿ ಆರೋಪಿತನಾದ TN94-Z-3747ನೇ ಲಾರಿಯ ಚಾಲಕ ಬಾಲ ಮುರುಗನ್, ತಂದೆ : ರವಿ, ಇಲುಪ್ಪುರ, ಪಿಲ್ಲಾಪಾಲಾಯಮ್, ತಿರುಚನಾಪಳ್ಳಿ, ತಮಿಳುನಾಡು ಇವರನ್ನು ದಸ್ತಗಿರಿ ಮಾಡಲಾಗಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ನಮ್ಮ ವರದಿಗಾರರು
ವಿಲ್ಸನ್ ಡಿಸೋಜ
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now