ಫುಟ್ಬಾಲ್ ಅಂಗಳದಲ್ಲಿ ಚಾಂಪಿಯನ್ ಕಿರೀಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಫುಟ್ಬಾಲ್ ಅಂಗಳದಲ್ಲಿ ಚಾಂಪಿಯನ್ ಕಿರೀಟ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
0Shares

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜು ಕೋಡಿ ಕುಂದಾಪುರ ಇವರ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕ – ಬಾಲಕಿಯರ ತಂಡವು ಅಮೋಘ ಆಟದ ಪ್ರದರ್ಶನ ನೀಡಿ ಜಯಶಾಲಿಗಳಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ ನಿರಂತರ ಪ್ರೋತ್ಸಾಹ ಹಾಗೂ ಸೂಕ್ತ ತರಬೇತಿಯನ್ನು ನೀಡಿ ವಿದ್ಯಾರ್ಥಿಗಳನ್ನು ಸಜ್ಜುಗೊಳಿಸಿದ್ದಾರೆ.

ಯಶಸ್ಸಿನ ಹೆಜ್ಜೆ ಇಟ್ಟಿರುವ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಜಿಲ್ಲಾ ಮಟ್ಟದಲ್ಲಿಯೂ ಸಾಧನೆ ಮೆರೆಯುವಂತೆ ಶುಭ ಹಾರೈಸಿದರು.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now