ಕುಂದಾಪುರ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ನೇಮಕ

ಕುಂದಾಪುರ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ನೇಮಕ
0Shares

ಕುಂದಾಪುರ: ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯ ಕುಂದಾಪುರ ವಿಧಾನಸಭಾ ಕ್ಷೇತ್ರದ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ನೇಮಕಗೊಳಿಸಿ ಆದೇಶಿದ್ದಾರೆ.
ಕೆದೂರು ಸದಾನಂದ ಶೆಟ್ಟಿ ಅವರು ತಕ್ಷಣ ಕುಂದಾಪುರ ಬ್ಲಾಕ್ ಕಾಂಗ್ರೆಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖವಾಗಬೇಕೆಂದು ರಾಜ್ಯಧ್ಯಕ್ಷರು ಸೂಚಿಸಿದ್ದಾರೆ.
ಕೆದೂರು ಸದಾನಂದ ಶೆಟ್ಟಿ ಅವರು, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

0Shares

Join Our WhatsApp Group!

Stay updated with the latest news and updates by joining our WhatsApp group. Click the button below to join:

Join Now