
ಕುಂದಾಪುರ: ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯ, ಸಿದ್ದಾಪುರ ಭಾಗದ ವಿಜಯಕರ್ನಾಟಕ ದಿನಪತ್ರಿಕೆ ವರದಿಗಾರ, ನಾಗೇಶ್ ಗಾಣಿಗ ನೇರಳಕಟ್ಟೆ (40) ಬುಧವಾರ ಹೃದಯಘಾತದಿಂದ ನಿಧನರಾಗಿದ್ದಾರೆ.
ಗ್ರಾಮೀಣ ಭಾಗದ ಸಮಸ್ಯೆಗಳ ಬಗ್ಗೆ ತಮ್ಮ ವರದಿಗಾರಿಕೆಯ ಮೂಲಕ ಬೆಳಕು ಚೆಲ್ಲಿದ್ದಲ್ಲದೇ ಹಲವಾರು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.ಕರ್ತವ್ಯದಲ್ಲಿರುವಾಗ ತೀವ್ರ ಹೃದಯಾಘಾತಕ್ಕೊಳಗಾಗಿದ್ದು, ಅವರನ್ನು ಕುಂದಾಪುರದ ಖಾಸಗೀ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅಷ್ಟರಲ್ಲಾಗಲೇ ಅವರು ಇಹಲೋಕ ತ್ಯಜಿಸಿದ್ದರು ಎಂದು ತಿಳಿದುಬಂದಿದೆ.
ನಾಗೇಶ್ ಗಾಣಿಗರ ನಿಧನದಿಂದ ಪತ್ರಿಕೋದ್ಯಮಕ್ಕೆ ತುಂಬಲಾರದ ನಷ್ಟವುಂಟಾಗಿದ್ದು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಾರ ಬಂಧು ಬಳಗ, ಸ್ನೇಹಿತರನ್ನೂ ಅಗಲಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now