
ಕುಂದಾಪುರ: ವ್ಯಕ್ತಿಯೊಬ್ಬರನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆಗೈದ ಘಟನೆ ಶುಕ್ರವಾರ ಬೆಳಿಗ್ಗೆ 3.30 ರ ಸುಮಾರಿಗೆ ಕುಂದಾಪುರದ ಚರ್ಚ್ ರಸ್ತೆಯಲ್ಲಿನ ಹೋಲಿ ರೋಸರಿ ಚರ್ಚ್ ಎದುರಿಗೆ ನಡೆದಿದೆ.
ಬಾರ್ಕೂರು ಕಚ್ಚೂರು ಮೂಲದ ಐವನ್ ರಿಚರ್ಡ್ ಮಸ್ಕರೇನಸ್(45) ಕೊಲೆಯಾದವರು.
. ಶುಕ್ರವಾರ ಮುಂಜಾನೆ ಕಾರಿನಲ್ಲಿ ಬಂದಿದ್ದಾಗ ಕುಂದಾಪುರ ಚರ್ಚ್ ಎದುರಿಗೆ ಈ ಘಟನೆ ನಡೆದಿದೆ. ಪಿಸ್ತುಲ್ ಮೂಲಕ ಆರೋಪಿ ಐವನ್ ಅವರಿಗೆ ಗುಂಡು ಹೊಡೆದು ಪರಾರಿಯಾಗಿದ್ದು ತೀವೃ ರಕ್ತಸ್ರಾವಗೊಂಡ ಐವನ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಹಿಳೆ ಆರೋಪಿಯನ್ನು ಗುರುತು ಹಚ್ಚಿದ್ದು ಪರಾರಿಯಾದ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಹಣಕಾಸು ಅಥವಾ ಬೇರ್ಯಾವುದೇ ವ್ಯವಹಾರ ಸಂಬಂಧಪಟ್ಟ ವಿಚಾರಕ್ಕೆ ಕೊಲೆ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆ ಅಂದಾಜಿಸಲಾಗಿದೆ.
ಉಡುಪಿ ಎಸ್ಪಿ ಹರಿರಾಂ ಶಂಕರ್, ಹೆಚ್ಚುವರಿ ಎಸ್ಪಿ ಸುಧಾಕರ್ ನಾಯಕ್, ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ, ಕುಂದಾಪುರ ನಗರ ಠಾಣೆ ಇನ್ಸ್ಪೆಕ್ಟರ್ ಜಯರಾಮ ಗೌಡ, ಪಿಎಸ್ಐಗಳಾದ ನಂಜಾ ನಾಯ್ಕ್, ಪುಷ್ಪಾ, ಅನೂಪ್ ನಾಯಕ್ ಮೊದಲಾದವರು ಭೇಟಿ ನೀಡಿದ್ದಾರೆ. ಸೋಕೋ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now