
ಕುಂದಾಪುರ : ದೇಶದ ಸ್ವಾತಂತ್ರ್ಯಕ್ಕಾಗಿ ಪ್ರಾಣವನ್ನೇ ಅರ್ಪಿಸಿದ ಅಮರ ಹುತಾತ್ಮರನ್ನು ನೆನಪಿಸುವ ಉದ್ದೇಶದಿಂದ ಭಾರತೀಯ ಜನತಾ ಪಾರ್ಟಿ ಕುಂದಾಪುರ ಮಂಡಲ ಹಾಗೂ ಬಿಜೆಪಿ ಯುವ ಮೋರ್ಚಾ ಕುಂದಾಪುರ ಘಟಕದ ವತಿಯಿಂದ ಆಗಸ್ಟ್ 11 ರಂದು ‘ತಿರಂಗಾ ಯಾತ್ರೆ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದ ಆಮಂತ್ರಣ ಪೋಸ್ಟರ್ ಇಂದು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ. ಕಿರಣ್ ಕುಮಾರ್ ಕೊಡ್ಗಿ ಅವರು ಅಮೃತ ಹಸ್ತದಿಂದ ಪೋಸ್ಟರ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ,ನಿಕಟ ಪೂರ್ವ ಅಧ್ಯಕ್ಷ ಶಂಕರ ಅಂಕದಕಟ್ಟೆ,ಪ್ರಧಾನ ಕಾರ್ಯದರ್ಶಿಗಳಾದ ಸತೀಶ್ ಪೂಜಾರಿ ವಕ್ವಾಡಿ, ಸುಧೀರ್ ಕೆ ಎಸ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಉಪಾಧ್ಯಕ್ಷ ಪ್ರಸಾದ ಬಿಲ್ಲವ, ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಣಿ ಸದಸ್ಯ ವಿನೋದ್ ದೇವಾಡಿಗ, ಕುಂದಾಪುರ ಯುವ ಮೋರ್ಚ ಅಧ್ಯಕ್ಷ ಕಿರಣ್ ಪೂಜಾರಿ ತೆಕ್ಕಟ್ಟೆ, ಪ್ರಧಾನ ಕಾರ್ಯದರ್ಶಿಗಳಾದ ಚೇತನ್ ಖಾರ್ವಿ,ಸಂಪತ್ ಶೇರಿಗಾರ್, ಕುಂದಾಪುರ ಮಂಡಲ ಉಪಾಧ್ಯಕ್ಷ ಸುನೀಲ್ ಶೆಟ್ಟಿ ಹೇರಿಕುದ್ರು,, ಒಬಿಸಿ ಮೋರ್ಚಾದ ಅಧ್ಯಕ್ಷ ಸುರೇಂದ್ರ ಕಾಂಚನ್ ಸಂಗಮ್, ಪ್ರಮುಖರಾದ ಗಿರೀಶ್ ಕುಂದಾಪುರ,ಪುರಸಭೆ ಮಾಜಿ ಸದಸ್ಯರಾದ ಸಂತೋಷ್ ಶೆಟ್ಟಿ,ದಿವಾಕರ್ ಕಡ್ಗಿ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಭಾಸ್ಕರ್ ಬಿಲ್ಲವ ಹೇರಿಕುದ್ರು, ಹಾಗೂ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.
Join Our WhatsApp Group!
Stay updated with the latest news and updates by joining our WhatsApp group. Click the button below to join:
Join Now